Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ವ್ಯಕ್ತಿಯನ್ನು ಕೊಲೆ ಮಾಡಿ ಅರೆಬರೆ ಸುಟ್ಟು ಹಾಕಿದ ದುಷ್ಕರ್ಮಿಗಳು

ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಅರೆಬರೆ ಸುಟ್ಟು ಹಾಕಿರುವ ಕೃತ್ಯವೊಂದು ಮಳವಳ್ಳಿ ತಾಲ್ಲೂಕಿನ ಹಾಡ್ಲಿ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ಹೊರವಲಯದ ಜಮೀನಿನೊಂದರ ಬಳಿ ಅರೆಬರೆ ಸುಟ್ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವದ ಕಳೆಬರ ಸೋಮವಾರ ರಾತ್ರಿ 9.30ರ ಸಮಯದಲ್ಲಿ ಪತ್ತೆಯಾಗಿದೆ.

ಸುದ್ದಿತಿಳಿದು ಸ್ಥಳಕ್ಕೆ ಧಾವಿಸಿದ ಹಲಗೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 45 ವರ್ಷದ ಸಿದ್ದರಾಜು ಎಂಬಾತ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗುತ್ತಿದೆಯಾದರೂ ಮುಖ ಚಹರೆ ಕಾಣದಷ್ಟು ದೇಹದ ಬಹುತೇಕ ಭಾಗ ಸುಟ್ಟು ಹೋಗಿರುವುದರಿಂದ ಎಫ್ ಎಸ್ ಎಲ್ ವರದಿ ಬಂದ ನಂತರವಷ್ಟೇ ವ್ಯಕ್ತಿ ಯಾರೆಂದು ಖಚಿತವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಸ್ತಿ ವೈಷಮ್ಯದಿಂದ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಮೊದಲಿಗೆ ಈತನ‌ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ನಂತರ ಶವವನ್ನು ಗುಂಡಿಯೊಂದರಲ್ಲಿ ಹಾಕಿ ಶವದ ಮೇಲೆ ಸೌದೆಗಳನ್ನು ಹಾಕಿ ಸುಟ್ಟು ಹಾಕಿರಬಹುದು ಎನ್ನಲಾಗಿದೆ.

ಮಂಗಳವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಶವದ ತಲೆ ಬುರುಡೆ ಸೇರಿ ಉಳಿದ ಕಳೆಬರಹವನ್ನು ಸಂಗ್ರಹಿಸಿರುವ ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶ್ರೀಧರ್, ಹಲಗೂರು ಪಿ ಎಸ್ ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ