Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ಅತ್ಯಾಚಾರ-ಕೊಲೆ ಪ್ರಕರಣ : ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆ

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಕಾಂತರಾಜು ವಿರುದ್ಧ ಮಳವಳ್ಳಿ ಪೊಲೀಸರು ನ್ಯಾಯಾಲಯಕ್ಕೆ ಮಂಗಳವಾರ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

ಈ ಪ್ರಕರಣವು ಘೋರ ಹಾಗೂ ಸೂಕ್ಷ್ಮವಾಗಿದ್ದರಿಂದ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕರಣದ ತನಿಖೆಯನ್ನು ಮಳವಳ್ಳಿ ಉಪ ವಿಭಾಗದ ಡಿ.ಎಸ್‌.ಪಿ. ಅವರಿಗೆ ವಹಿಸಿದ್ದರು. ತನಿಖಾಧಿಕಾರಿ ಅವರು ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕರ ಮೇಲುಸ್ತುವಾರಿಯಲ್ಲಿ ಪ್ರಕರಣದ ತನಿಖೆ ಕೈಗೊಂಡು ವೈಜ್ಞಾನಿಕವಾಗಿ ಹಾಗೂ ತ್ವರಿತವಾಗಿ ತನಿಖೆ ಪೂರೈಸಿ, ಕೇವಲ 14 ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸಿದ್ದಾರೆ.

ಕಳೆದ ಅಕ್ಟೋಬರ್ 11ರಂದು ನಡೆದ ಈ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302,201, 376(ಎ), 370(ಎಬಿ) ಐಪಿಸಿ ಮತ್ತು ಸೆಕ್ಷನ್ 5(ಬಿ), 5(ಎಂ), 6 ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಸೂಕ್ಷ್ಮತೆ ಹಿನ್ನೆಲೆಯಲ್ಲಿ ಎ.ಡಿ.ಜಿ.ಪಿ. (ಕಾನೂನು & ಸುವ್ಯವಸ್ಥೆ) ಬೆಂಗಳೂರು ಹಾಗೂ ಐಜಿಪಿ ದಕ್ಷಿಣ ವಲಯ ಮೈಸೂರು ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಮಳವಳ್ಳಿಗೆ ಭೇಟಿ ನೀಡಿ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದರು.

ಮಳವಳ್ಳಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ದ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೇ ಈ ಕೃತ್ಯ ಎಸಗಿದ ಅರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂಬ ಆಗ್ರಹ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರಿಂದ ಹೇಳಿ ಬಂದಿತ್ತು. ಅಲ್ಲದೇ ಕೂಡಲೇ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಒತ್ತಾಯವು ಕೇಳಿ ಬಂದಿತ್ತು.

ಅತ್ಯಾಚಾರಕ್ಕೀಡಾದ ಬಾಲಕಿಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಿತ್ತು, ಅಲ್ಲದೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹಮದ್, ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ವೈಯಕ್ತಿಕವಾಗಿ ಪರಿಹಾರ ವಿತರಣೆ ಮಾಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!