ಮಳವಳ್ಳಿ ಪಟ್ಟಣದ ಅನಂತ್ ರಾಮ್ ಸರ್ಕಲ್ ನಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಮನ್ಮುಲ್ ನಿರ್ದೇಶಕ ವಿಶ್ವಾಸ್ ಮಾತನಾಡಿ, ರಾಜ್ಯದ ಉಪಚುನಾವಣೆಯ
3 ಕ್ಷೇತ್ರಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾರ್ಯ ವೈಖರಿಯಿಂದ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವು ಸಾಧಿಸಿರುವುದು ಸಂತಸವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಮೈಸೂರು ಪ್ರಾಂತ್ಯದ ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಗ್ಯಾರಂಟಿ ಸ್ಥಾನ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಮೇಲೆ ಇಲ್ಲದ ಸಲ್ಲದ ಆರೋಪಗಳನ್ನು ಮಾಡಿದರು. ಆದರೆ ಮತದಾರರು ಆರೋಪಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಬಲಪಡಿಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿಗೆ ಮತದಾರರು ಮತ ನೀಡಿರುವುದು ಸರ್ಕಾರದ ಮುಂದೆ ಯೋಜನೆಗಳಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಇದೇ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿಪಿ ರಾಜು, ದೊಡ್ಡಯ್ಯ, ಪುರಸಭೆ ಸದಸ್ಯರಾದ ಶಿವಸ್ವಾಮಿ, ಪ್ರಮೀಳಾ, ಆನಂದ್, ಸಂತೋಷ್, ಬಸವರಾಜು, ಅಯೂಬ್ ಫಾಷ, ಮುಖಂಡರಾದ ದೇವರಾಜು, ಪುಟ್ಟಸ್ವಾಮಿ, ಬಂಕ್ ಮಹಾದೇವ, ಶಾಂತರಾಜು, ರಮೇಶ್, ದ್ಯಾಪೇಗೌಡ, ಶಿವ ಮಾದೇಗೌಡ, ಚೇತನ, ನಾಯಕ್, ಮಹದೇವ ಹಾಗೂ ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.




