Monday, November 23, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಜೂ.29ಕ್ಕೆ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಮಳವಳ್ಳಿ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳು, ಯುವಕ ಮಿತ್ರರು, ರಕ್ತದಾನಿಗಳ ಒಕ್ಕೂಟ, ”ಮಿಮ್ಸ್ ರಕ್ತಕೋಶ – ಮಂಡ್ಯ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಳವಳ್ಳಿ, ಆರೋಗ್ಯ ಇಲಾಖೆ, ಮಳವಳ್ಳಿ ಇವರ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ವಿಶ್ವ ಮಾನವ, ಜಗದಕವಿ ಕುವೆಂಪು ಗೌರವಾರ್ಥವಾಗಿ ಜೂನ್ 29ರಂದು ಮಳವಳ್ಳಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.

ಇದೇ ಸಂದರ್ಭದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ದೇಶದ ಅತೀ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನೀಲನಕ್ಷೆ ಲೋಕಾರ್ಪಣೆ ಮಾಡುವರು. ಈ ರಕ್ತದಾನ ಶಿಬಿರದಲ್ಲಿ ಆಸಕ್ತರು ಭಾಗವಹಿಸಿ ರಕ್ತದಾನ ಮಾಡುವಂತೆ ಕೋರಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ