Friday, September 20, 2024

ಪ್ರಾಯೋಗಿಕ ಆವೃತ್ತಿ

ಏ.29ಕ್ಕೆ ಮಂಡ್ಯ ಜಿಲ್ಲೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಏ.29ರಂದು ಬೆಳಿಗ್ಗೆ 11ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಳವಳ್ಳಿ ಮತ್ತು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ, ಎಸ್ಟಿ ಸಮಿತಿ ಜಿಲ್ಲಾಧ್ಯಕ್ಷ ಸುರೇಶ್ ಕಂಠಿ ತಿಳಿಸಿದ್ದಾರೆ.

ಮಂಡ್ಯ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಸಮಿತಿ ಆಯೋಜಿಸಿದ್ದ ಪೂರ್ವಭಾವಿ  ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯು ಮೇ.10ರಂದು ನಡೆಯಲಿದೆ, ಮಂಡ್ಯ ಜಿಲ್ಲೆಯಲ್ಲಿನ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್ ಎಸ್ಸಿ, ಎಸ್ಟಿ ಸಮಿತಿ ಸಂಕಲ್ಪಮಾಡಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬಹಿರಂಗ ಸಭೆಗಳು, ಚುನಾವಣಾ ಪ್ರಚಾರ, ಮತಯಾಚನೆ ಸುಗಮವಾಗಿ ನಡೆಯುತ್ತಿದೆ ಎಂದು ನುಡಿದರು.

ಏ.29ರಂದು ಬೆಳಿಗ್ಗೆ 11 ಗಂಟೆಗೆ ಮಳವಳ್ಳಿ ಮತ್ತು ಮಧ್ಯಾಹ್ನ 1 ಗಂಟೆಗೆ ಕೆ.ಆರ್.ಪೇಟೆಯಲ್ಲಿ ನಡೆಯುವ ಬಹಿರಂಗ ಸಭೆಯನ್ನು ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಜಿಲ್ಲೆಯ ಮತದಾರರಲ್ಲಿ ಮತಯಾಚನೆ ಮಾಡಲಿದ್ದಾರೆ, ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಬಹಿರಂಗ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ, ನಾಗಮಂಗಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ  ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ, ಮದ್ದೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕದಲೂರು ಉದಯ್, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು, ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರವಿಕುಮಾರ್‌ಗಣಿಗ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ರೈತಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಇವರ ಪರ ಮತಯಾಚಿಸಲಿದ್ದಾರೆ ಎಂದರು.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಾಯಕರು, ಎಲ್ಲಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಸಾತನೂರು ಕೃಷ್ಣ, ಸಿದ್ದರಾಜು, ನಾಗಭೂಷಣ್, ಶಿವಯ್ಯ, ರವಿ, ಆಟೋಕೃಷ್ಣ, ಪ್ರಾಣೇಶ್, ಮುತ್ತು, ನಾಗೇಶ್, ಪ್ರಕಾಶ್, ಕನ್ನಲಿ ಚನ್ನಪ್ಪ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!