Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಸರ್ಕಾರಿ ನೌಕರರ ಸಂಘ ಅಧ್ಯಕ್ಷರಾಗಿ ಮಲ್ಲಿಕಾರ್ಜುನಯ್ಯ ಆಯ್ಕೆ

ಕರ್ನಾಟಕ ರಾಜ್ಯದ ಸರ್ಕಾರಿ ನೌಕರರ ತಾಲೂಕು ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ಮಲ್ಲಿಕಾರ್ಜುನಯ್ಯ, ರಾಜ್ಯ ಪರಿಷತ್ ಗೆ ಬಿ.ಚಂದ್ರಶೇಖರ್ ಹಾಗೂ ಖಜಾಂಚಿಯಾಗಿ ಶಿವಶಂಕರ್ ಆಯ್ಕೆಯಾದರು.

ಇಂದು ಸಂಘದ ಕಚೇರಿ ಆವರಣದಲ್ಲಿ ಅಧ್ಯಕ್ಷ ಮತ್ತು ರಾಜ್ಯ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 17 ಮತ ಪಡೆದು ಎಚ್ ಮಲ್ಲಿಕಾರ್ಜುನಯ್ಯ ವಿಜಯಶಾಲಿಯಾದರು. ನಾಗೇಶ್ 16 ಮತವನ್ನು ಪಡೆದು ಪರಾಜಿತರಾದರು.

ರಾಜ್ಯ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿ.ಚಂದ್ರಶೇಖರ್ 17 ಮತ ಪಡೆದು ಆಯ್ಕೆಯಾದರು ಮತ್ತು ಪುಟ್ಟಸ್ವಾಮಿ 16 ಮತ ಪರಾಜಿತರಾದರು. ಇದೇ ವೇಳೆಯಲ್ಲಿ ಖಜಾಂಚಿಯಾಗಿ ಶಿವಶಂಕರ್ ಅವಿರೋಧವಾಗಿ ಆಯ್ಕೆಯಾದರು.

ನಂತರ ನೂತನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಮಾತನಾಡಿ, ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲ ಶಿಕ್ಷಕ ವೃಂದಕ್ಕೆ ಸರ್ಕಾರಿ ನೌಕರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಶಿಕ್ಷಕರ ಹಾಗೂ ಸರ್ಕಾರ ನೌಕರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಸಂಘದ ಅಭಿವೃದ್ಧಿಗೆ ಕೈಜೋಡಿಸುತ್ತೇನೆ ಎಂದು ತಿಳಿಸಿದರು.

ಚುನಾವಣೆ ಅಧಿಕಾರಿಯಾಗಿ ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ