ಮಂಡ್ಯ ನಗರದ ಎಸ್.ಬಿ. ಎಜುಕೇಷನ್ ಟ್ರಸ್ಟ್ ಮಾಂಡವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99.6 ರಷ್ಟು ಫಲಿತಾಂಶ ಲಭಿಸಿದೆ.
ಕಾಲೇಜಿನ 196 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 268 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತಶಾಸ್ತ್ರದಲ್ಲಿ 10 ವಿದ್ಯಾರ್ಥಿಗಳು, ರಸಾಯನಶಾಸ್ತ್ರದಲ್ಲಿ 01, ಜೀವಶಾಸ್ತ್ರದಲ್ಲಿ 09, ಕನ್ನಡ ಭಾಷೆಯಲ್ಲಿ ಇಬ್ಬರು ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.
ಹಿಮಾನಿ ಎಸ್ ಡಿ 600 ಅಂಕಗಳಿಗೆ 592 ಅಂಕ ಪಡೆದು ಇಡೀ ರಾಜ್ಯದಲ್ಲೇ 08ನೇ ಸ್ಥಾನ ಮತ್ತು ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಪ್ರೀತಮ್ ಎಂ ಪಿ 600 ಅಂಕಗಳಿಗೆ 590 ಅಂಕ ಪಡೆದು ರಾಜ್ಯಕ್ಕೆ 10 ನೇ ಸ್ಥಾನ ಹಾಗೂ ಮಂಡ್ಯ ಜಿಲ್ಲೆಗೆ ತೃತೀಯ ಸ್ಥಾನ ಪಡೆಯುವ ಮೂಲಕ ಮಂಡ್ಯ ಜಿಲ್ಲೆ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಶೇ.99.6ರಷ್ಟು ಫಲಿತಾಂಶ ತರುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಎಸ್.ಬಿ. ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಪ್ರೊ.ಬಿ.ಶಿವಲಿಂಗಯ್ಯ, ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಪ್ರಾಂಶುಪಾಲ ಎಚ್.ಎಂ. ಶ್ರೀನಿವಾಸ್, ಶೈಕ್ಷಣಿಕ ಪಾಲುದಾರರಾದ ಚೇತನ್ ಕೃಷ್ಣ, ಎಂ.ಆರ್.ಮಂಜು ಮತ್ತು ಉಪನ್ಯಾಸಕರು ಹಾಗೂ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.




