Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿಗೆ ಶೇ. 99.8 ಫಲಿತಾಂಶ

ಮಂಡ್ಯ ನಗರದ ಎಸ್.ಬಿ. ಎಜುಕೇಷನ್ ಟ್ರಸ್ಟ್ ನ ಮಾಂಡವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99.8 ರಷ್ಟು ಫಲಿತಾಂಶ ಲಭಿಸಿದೆ. ಕಾಲೇಜಿನ 282 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 132 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಗಣಿತಶಾಸ್ತ್ರದಲ್ಲಿ 6 ವಿದ್ಯಾರ್ಥಿಗಳು, ರಸಾಯನಶಾಸ್ತ್ರದಲ್ಲಿ 11, ಜೀವಶಾಸ್ತ್ರದಲ್ಲಿ 15, ಕನ್ನಡ ಭಾಷೆಯಲ್ಲಿ ಇಬ್ಬರು ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. ಎಸ್.ಸಾನ್ವಿ ಶೆಟ್ಟಿ 600 ಅಂಕಗಳಿಗೆ 589 ಅಂಕ ಪಡೆದು ಇಡೀ ರಾಜ್ಯದಲ್ಲೇ 10ನೇ ಸ್ಥಾನ ಪಡೆಯುವ ಮೂಲಕ ಮಂಡ್ಯ ಜಿಲ್ಲೆ ಮತ್ತು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಶೇ. 99.52ರಷ್ಟು ಫಲಿತಾಂಶ ತರುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಎಸ್.ಬಿ. ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷ ಪ್ರೊ. ಬಿ.ಶಿವಲಿಂಗಯ್ಯ, ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಪ್ರಾಂಶುಪಾಲರಾದ ಎಚ್.ಎಂ. ಶ್ರೀನಿವಾಸ್, ಶೈಕ್ಷಣಿಕ ಪಾಲುದಾರರಾದ ಎಂ.ಆರ್.ಮಂಜು, ಚೇತನ್‌ಕೃಷ್ಣ, ಉಪನ್ಯಾಸಕರು ಹಾಗೂ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!