Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸಿಎಂಗೆ ಕಪ್ಪುಬಾವುಟ ಪ್ರದರ್ಶಿಸಲು ಯತ್ನ ; ದಸಂಸ ಕಾರ್ಯಕರ್ತರ ಬಂಧನ

ಮಂಡ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಗುರುವಾರ ಮಂಡ್ಯನಗರದಲ್ಲಿ ಪೊಲೀಸರು ಬಂಧಿಸಿದರು.

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಬೀಸುವ ಸಂದರ್ಭದಲ್ಲಿ ಪೊಲೀಸರು ಮುಖ್ಯಮಂತ್ರಿ ಆಗಮನಕ್ಕೆ ಮುನ್ನ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಕೆ ಎಂ ಅನಿಲ್ ಕುಮಾರ್, ಬಿ ಆನಂದ್, ಮಹದೇವು, ಕರಿಯಪ್ಪ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳನ್ನು ನಿರಂತರ ವಂಚಿಸುತ್ತಾ ಬಂದಿದ್ದಾರೆ, ರಾಜ್ಯದ ದಲಿತ, ಹಿಂದುಳಿದ ಅಲ್ಪಸಂಖ್ಯಾತ, ಬಹುಜನ ತಳ ಸಮುದಾಯಗಳ ಅಭಿವೃದ್ಧಿಗಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡುವುದಾಗಿ ನುಡಿದ ಸಿದ್ದರಾಮಯ್ಯ, ನುಡಿದಂತೆ ನಡೆಯಲಿಲ್ಲ ಏಕೆ ಎಂದು ಪ್ರಶ್ನಿಸಿದರು.

ಶೋಷಿತ ತಳ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿಯ ಕಾಂತರಾಜು ಆಯೋಗದ ವರದಿಯನ್ನು ಆರು ತಿಂಗಳ ಕಾಲಮಿತಿಯೊಳಗೆ ಜಾರಿಗೊಳಿಸದೆ 10 ವರ್ಷಗಳಿಂದಲೂ  ಸ್ವಾರ್ಥ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅಧಿಕಾರ ಉಂಡ ಮುಖ್ಯಮಂತ್ರಿ ಸಿದ್ದರಾಮಯ್ಯ  ಅಹಿಂದ ಸಮುದಾಯಗಳಿಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ