Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಾಡ್ಲ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಮಂಡ್ಯ ತಾಲೂಕಿನ ಮಾಡ್ಲ ಗ್ರಾಮದಲ್ಲಿ ಬಳಿ ಚಿರತೆ ಸೆರೆಯಾಗಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಕಳೆದ 15 ದಿನಗಳಿಂದ ಈ ಭಾಗದ ಸುತ್ತಮುತ್ತಲ ಗ್ರಾಮದಲ್ಲಿ ಚಿರತೆ ಉಪಟಳ ಹೆಚ್ಚಾಗಿತ್ತು. ಚಿರತೆ ಉಪಟಳದ ದೂರಿನ ಮೇರೆಗೆ ಅರಣ್ಯದ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಸೋಮವಾರ ರಾತ್ರಿ ಬೋನಿನಲ್ಲಿ ಇಟ್ಟಿದ್ದ ನಾಯಿ ತಿನ್ನಲು ಬಂದು ಚಿರತೆ ಸೆರೆಯಾಗಿದೆ. ಬೋನಿನಲ್ಲಿ ಸೆರೆ ಸಿಕ್ಕ ಚಿರತೆ ನೋಡಲು ಜನ ಮುಗಿಬಿದ್ದು ಕೆಲಕಾಲ ಗದ್ದಲ ಸೃಷ್ಟಿಸಿದರು.

ಬೋನಿಗೆ ಬಿದ್ದಿರುವ ಚಿರತೆಯನ್ನು ಅರಣ್ಯಕ್ಕೆ ಬಿಡಲು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕ್ರಮ ವಹಿಸಿದ್ದಾರೆ‌.
ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಸುತ್ತಮುತ್ತಲ ಗ್ರಾಮಗಳ ಜನರು, ಚಿರತೆ ಮರಿಗಳು ತಪ್ಪಿಸಿಕೊಂಡಿದ್ದು ಅವುಗಳನ್ನು ರಕ್ಷಿಸಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ