Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನಾಳೆ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಮೇ 21 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 11:30 ಗಂಟೆಗೆ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಲಾಗಿರುವ ಆರೋಗ್ಯ ಧಾಮ ಮತ್ತು ಹೈಟೆಕ್ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:30 ಗಂಟೆಗೆ ಜಿಲ್ಲಾ ಪಂಚಾಯತ್‌ನಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3:30 ಗಂಟೆಗೆ ಮದ್ದೂರು, ಚನ್ನಪಟ್ಟಣ, ರಾಮನಗರ ಮತ್ತು ಬಿಡದಿ ಮಾರ್ಗವಾಗಿ ಕೇಂದ್ರಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ