Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನಿರ್ಮಿತಿ ಕೇಂದ್ರದ ಜಯಪ್ರಕಾಶ್ ನೇಮಕ ಕಾನೂನು ಬಾಹಿರ : ಆರೋಪ

ಮಂಡ್ಯ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಬಿ.ಜಯಪ್ರಕಾಶ್ ಅವರನ್ನು ಕಾನೂನು ಬಾಹಿರವಾಗಿ ನೇಮಕ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಆರೋಪಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ನಿರ್ಮಿತಿ ಕೇಂದ್ರದ ಸದರಿ ಹುದ್ದೆಗೆ 2022ರ ಸೆಪ್ಟೆಂಬರ್ 23ರಂದು ಪ್ರಕಟಣೆ ಹೊರಡಿಸಿದ್ದು, ವಿನೋದ್ ವಿ ಎಂಬುವವರನ್ನು ಆಯ್ಕೆ ಮಾಡಲಾಗಿತ್ತು. ಅವರು ನಕಲಿ ದಾಖಲಾತಿ ಸಲ್ಲಿಸಿರುವುದು ಪತ್ತೆಯಾಗಿ ವಜಾ ಮಾಡಲಾಗಿತ್ತು ಎಂದರು.

ವಿನೋದ್.ವಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ ಬಿ.ಜಯಪ್ರಕಾಶ್ ಅವರನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಅಂದರೆ 2023ರ ಸೆಪ್ಟೆಂಬರ್‌ವರೆಗೆ ನೇಮಕ ಮಾಡಲಾಗಿದ್ದು, ಇಲ್ಲಿಯವೆರೆಗೂ ಅವರು ಯೋಜನಾ ವ್ಯವಸ್ಥಾಪಕ ಹುದ್ದೆಯಲ್ಲಿಯೇ ಮುಂದುವರೆಯುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಯವರು ಈ ಪ್ರಕರಣವನ್ನು ಸರಿಯಾದ ಕ್ರಮದಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ