Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಅನ್ಬುಕುಮಾರ್‌ ನೇಮಕ

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿದ್ದ ಡಾ.ಪಿ.ಸಿ.ಜಾಫರ್‌ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೇಮಿಸಿ, ತೆರವಾದ ಸ್ಥಾನಕ್ಕೆ ವಿ.ಅನ್ಬುಕುಮಾರ್‌ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

2023ರ ಡಿಸೆಂಬರ್‌ನಲ್ಲಿ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ಸರ್ಕಾರ ನೇಮಕ ಮಾಡಿತ್ತು. ಈಗ ಸರ್ಕಾರ ಮಾರ್ಪಾಡು ಮಾಡಿ, ಆದೇಶ ಹೊರಡಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ತಾಲ್ಲೂಕು ಕಚೇರಿ, ಜಿಲ್ಲಾ ಆಸ್ಪತ್ರೆ ಹಾಗೂ ಇನ್ನಿತರೆ ಜಿಲ್ಲೆಯಲ್ಲಿನ ಪ್ರಮುಖ ಕಚೇರಿ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಜರಿರಬೇಕು. ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಗಳಲ್ಲಿ ಸಚಿವರೊಂದಿಗೆ ಭಾಗವಹಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ