Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸರ್ಕಾರಿ ಪ್ರೌಢಶಾಲೆಯಲ್ಲಿ ಹೈಟೆಕ್ ಶೌಚಾಲಯ ಉದ್ಘಾಟನೆ

ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ರೀಚಿಂಗ್ ಹ್ಯಾಂಡ್ ಸಂಸ್ಥೆ ವತಿಯಿಂದ ಗರ್ಲ್ಸ್ ಗ್ಲೋರಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಹೆಣ್ಣು ಮಕ್ಕಳ ಹೈಟೆಕ್ ಶೌಚಾಲಯವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಿದರು.

ರೀಚಿಂಗ್ ಹ್ಯಾಂಡ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಎನ್.ಎ.ಎಲಿಯಜರ್ ಮಾತನಾಡಿ 6 ಲಕ್ಷ ರೂ.ವೆಚ್ಚದಲ್ಲಿ ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಮಂಡ್ಯದ ಅರ್ಕೆಶ್ವರ ನಗರ, ಹಾಲಹಳ್ಳಿ ಸರ್ಕಾರಿ ಪ್ರೌಢಶಾಲೆ, ಚೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲೂ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣ ಮಾಡಲಾಗಿದೆ ಎಂದರು.

ಹೆಣ್ಣು ಮಕ್ಕಳು ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಂಡು ಅವರಿಗೆ ಎಮ್ಎಚ್ಎಂ ಆರೋಗ್ಯ ಕಿಟ್ ಗಳನ್ನು ವಿತರಣೆ ಮಾಡಲಾಗಿದೆ. ಹೆಣ್ಣು ಮಕ್ಕಳು ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಹಾಗೂ ಮುಟ್ಟಿನ ಸಂದರ್ಭದಲ್ಲಿ ಸಮಸ್ಯೆಗಳು ಆಗಬಾರದು ಎಂದು ಪ್ಯಾಡ್ ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು.

ವಿದ್ಯಾರ್ಥಿನಿಯರು ಶೌಚಾಲಯ ಬಳಕೆ ಮಾಡುವ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬಿಇಓ ಮಹದೇವ, ಶಿಕ್ಷಣಾಧಿಕಾರಿ ಚಂದ್ರಕಾಂತ, ಎಲ್ಲರೊಳಗೊಂದಾಗು ವಿನಯ್ ಕುಮಾರ್, ಮುಖ್ಯ ಶಿಕ್ಷಕ ದೇವರಾಜು, ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್, ಜಿಲ್ಲಾ ಪರಿಸರ ಅಧಿಕಾರಿ ಗೀತಾ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ