Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ

ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತ್ಯುನ್ನತವಾಗಿ ಅಂಕಗಳಿಸಿ ಸಾಧನೆಗೈದ ಮಂಡ್ಯ ಜಿಲ್ಲೆಯ ವಿದ್ಯಾರ್ಥಿನಿಯರಾದ ಧೃತಿ ಮತ್ತು ಪುನೀತ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಕೆ.ಆರ್ ಪೇಟೆಯ ವಿದ್ಯಾರ್ಥಿನಿ ಧೃತಿ ಎಸ್. ಎಸ್ ಎಲ್. ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕಗಳನ್ನು ಗಳಿಸಿದ್ದು, ಮದ್ದೂರಿನ ವಿದ್ಯಾರ್ಥಿನಿ ಪುನೀತ 625 ಅಂಕಗಳಿಗೆ 624 ಅಂಕಗಳನ್ನು ಗಳಿಸಿರುತ್ತಾರೆ.

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿದರು. ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳಿಸುವ ಮೂಲಕ ಜಿಲ್ಲೆ ಮತ್ತು ಇಲಾಖೆಯ ಕೀರ್ತಿಗೆ ಕಾರಣರಾಗಿದ್ದೀರಿ ಎಂದು ವಿದ್ಯಾರ್ಥಿನಿಯರನ್ನು ಶ್ಲಾಘಿಸಿದರು.

ಬದುಕಿನಲ್ಲಿ ಹೆಸರು, ಸಾಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಉಳಿಸಿಕೊಳ್ಳುವುದು ಅಷ್ಟೇ ಮುಖ್ಯವಾಗಿರುತ್ತದೆ. ವಿದ್ಯಾಭ್ಯಾಸದ ಪ್ರತಿ ಹಂತದಲ್ಲೂ ಉತ್ತಮ ಅಂಕಗಳಿಸಿ ಹಾಗೂ ಸಾಧನೆ, ಯಶಸ್ಸು ನಿಮ್ಮದಾಗಲಿ ಎಂದು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ. ಹೆಚ್ , ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಚಂದ್ರಶೇಖರ.ಬಿ , ಶಿಕ್ಷಣಾಧಿಕಾರಿ ಚಂದ್ರಕಾಂತ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ