Tuesday, November 24, 2026

ಪ್ರಾಯೋಗಿಕ ಆವೃತ್ತಿ

‘ಪುರುಷರು ಮಹಿಳೆಯರ ಶಕ್ತಿ ಕುಂದಿಸದಿದ್ದರೆ, ತಾನಾಗಿಯೇ ಬೆಳೆಯುತ್ತಾರೆ ‘ ; ಡಾ.ಕುಮಾರ

ಸ್ವಾಮಿ ವಿವೇಕಾನಂದರು ಮಹಿಳೆಯರಿಗೆ ಅಂತರಿಕವಾಗಿ ಮಹಾಶಕ್ತಿ ಇದೆ. ಪುರುಷರು ಮಹಿಳೆಯರ ಶಕ್ತಿ ಕುಂದಿಸದೆ ಇದ್ದರೆ ಸಾಕು. ಮಹಿಳೆಯರು ತಾನಾಗಿಯೇ ಸಮಾಜದಲ್ಲಿ ಬೆಳೆಯುತ್ತಾರೆ ಎಂದು ಹೇಳಿದ್ದಾರೆ ಅದನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಕುಟುಂಬದಲ್ಲಿ ಕೆಲಸ ನಿರ್ವಹಿಸುವುದರೊಂದಿಗೆ ಸಮಾಜದಲ್ಲೂ ಕೆಲಸ ನಿರ್ವಹಿಸಿ, ಮನೆ ಮತ್ತು ಲೋಕದ ದೀಪವನ್ನು ಬೆಳಗಿಸುವ ಶಕ್ತಿಯಾಗಿದ್ದಾಳೆ. ಮಹಿಳೆಯರ ಅಭಿವೃದ್ಧಿಗೆ ಬೆಂಬಲ ನೀಡಿದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಮಹಿಳೆಯರಿಗೆ ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಒದಗಿಸಬೇಕು ಎಂದರು.

ಹೆಣ್ಣಿಲ್ಲದೆ ಜೀವ ಮತ್ತು ಜೀವನವಿಲ್ಲ, ಮಹಿಳೆ ಪ್ರಪಂಚದ ದೊಡ್ಡ ಶಕ್ತಿ. ಮಹಿಳೆಗೆ ಇನ್ನೊಂದು ಜೀವಕ್ಕೆ ಜನ್ಮ ನೀಡುವ ಶಕ್ತಿ ಹಾಗೂ ಇಡೀ ಕುಟುಂಬವನ್ನು ನಿರ್ವಹಿಸುವ ಶಕ್ತಿ ಇದೆ. ಮಹಿಳೆಯರನ್ನು ಪ್ರಕೃತಿ ಹಾಗೂ ಭೂಮಿಗೆ ಹೋಲಿಸುತ್ತಾರೆ. ಸೂಪರ್ ಮೆನ್ ಎಂಬ ಪದ ಕೇಳಿಬರುತ್ತದೆ. ಸೂಪರ್ ವುಮೆನ್ ಎಂಬ ಪದ ಹೇಳಲು ಸಮಾಜ ತಯಾರಿಲ್ಲ, ಇದನ್ನು ಬದಲಾಯಿಸಿ ಎಲ್ಲರೂ ಸೂಪರ್ ವುಮೆನ್ ಆಗಿ ಹೊರಹೊಮ್ಮಿ ಎಂದು ಶುಭ ಹರೈಸಿದರು. ಮಹಿಳಾ ದಿನಾಚರಣೆಗಳು ಆತ್ಮವಲೋಕಲನದ ವೇದಿಕೆಗಳಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸ್ವಾತಂತ್ರ್ಯಕ್ಕೂ ಹಿಂದೆ ಮಹಿಳೆಯರು ಕೇವಲ ಮನೆಯ ಕೆಲಸಕ್ಕೆ ಮಾತ್ರ ಸೀಮಿತವಾಗಿದ್ದರು. ಆದರೆ ಇಂದು ಅಟೋ ರಿಕ್ಷಾ ದಿಂದ ಅಂತರಿಕ್ಷಾ ತಲುಪುವ ರಾಕೆಟ್ ನ್ನು ಉಡಾವಣೆ ಮಾಡುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಇದು ಮಹಿಳೆಯರಲ್ಲಿ ಎಂತಹ ಅಭೂತಪೂರ್ವ ಆತ್ಮವಿಶ್ವಾಸ ಮತ್ತು ಶ್ರದ್ಧೆ ಇದೆ ಎಂಬುದನ್ನು ಎತ್ತಿ ತೋರುತ್ತದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್.ಎಂ ಅವರು, ಪ್ರಸ್ತುತ 21 ನೇ ಶತಮಾನವು ಮಹಿಳೆಯರ ಶತಮಾನ ಎಂದರೆ ತಪ್ಪಾಗುವುದಿಲ್ಲ ಈಗಿನ ಕಾಲದಲ್ಲಿ ಮಹಿಳೆಯರು ಸ್ವಭಾಲಂಬಿಯಾಗಿ ಬುದುಕುತ್ತಿರುವುದನ್ನು ನಾವು ಕಾಣಬಹುದು, ಆಟೋರಿಕ್ಷಾದಿಂದ ಹಿಡಿದು ಅಂತರಿಕ್ಷದವರೆಗೂ ಮಹಿಳೆಯರ ಸಾಧನೆ ನಿಜಕ್ಕೂ ಅಪಾರ ಎಂದರು.

ಪೊಲೀಸ್ ಆರಕ್ಷಕ ಉಪ ನಿರೀಕ್ಷಕರಾದ ಸುಮಾರಾಣಿ ಅವರು ಮಹಿಳೆಯರನ್ನು ಉದ್ದೇಶಿಸಿ ಉಪನ್ಯಾಸ ನೀಡಿ, ಹೆಣ್ಣು ಶಕ್ತಿಯ ಪ್ರತೀಕವಾಗಿದ್ದು, ಯಾರಲ್ಲಿಯೂ ಅವಲಂಬಿತವಾಗದೆ ಸ್ವತಂತ್ರವಾಗಿ, ಆತ್ಮ ವಿಶ್ವಾಸದಿಂದ ಬದುಕುವ ಶಕ್ತಿ ಬೆಳಸಿಕೊಳ್ಳಬೇಕು. ಭಯ ವಿಲ್ಲದೆ ಶೋಷಣೆಯ ವಿರುದ್ಧವಾಗಲಿ, ದೌರ್ಜನ್ಯದ ವಿರುದ್ಧವಾಗಿಲಿ ದ್ವನಿ ಎತ್ತಿ ಎದುರಿಸಬೇಕು ಎಂದು ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಆಯುಷ್ ಇಲಾಖೆಯ ಹಿರಿಯ ವೈದ್ಯಧಿಕಾರಿ ಬಿ. ಎಸ್ ಸೀತಾಲಕ್ಷ್ಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪುಷ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುಳ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರೂಪಶ್ರೀ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಧುಶ್ರೀ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶರಾದ ಎಸ್ ಹೆಚ್ ನಿರ್ಮಲ ಅವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ