Thursday, November 19, 2026

ಪ್ರಾಯೋಗಿಕ ಆವೃತ್ತಿ

ಕ್ರೀಡಾಂಗಣ ಸ್ಥಳದಲ್ಲಿ ಕನ್ನಡ ಭವನ ನಿರ್ಮಾಣ ಕೈಬಿಡಿ : ಶಿವಲಿಂಗಯ್ಯ

ಮಂಡ್ಯ ನಗರದ ಒಳಾಂಗಣ ಸಂಕೀರ್ಣದ ಬಳಿಯ ವಾಲಿಬಾಲ್ ಕ್ರೀಡಾಂಗಣ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಮಂಡ್ಯ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಶಿವಲಿಂಗಯ್ಯ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾಂಗಣ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸುವುದು ಸೂಕ್ತವಲ್ಲ. ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಈ ಸ್ಥಳ ಅಗತ್ಯವಿದ್ದು, ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದರು.

ಈ ಸ್ಥಳದಲ್ಲಿ ವಾಲಿಬಾಲ್ ಕ್ರೀಡೆಗೆ ಸಂಬಂಧಿಸಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸುವ ಕಾಮಗಾರಿಗೆ ೨೦೨೩ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಗುದ್ದಲಿ ಪೂಜೆ ನಡೆದಿತ್ತು. ಇದಕ್ಕಾಗಿ 68 ಲಕ್ಷ ರೂ.ಗಳ ಅನುದಾನ ಮೀಸಲಿಡಲಾಗಿತ್ತು. 28 ಲಕ್ಷ ರೂ ಅನುದಾನ ಬಿಡುಗಡೆಯಾಗಿ ಗುದ್ದಲಿ ಪೂಜೆ ನೆರವೇರುವ ಸಂದರ್ಭದಲ್ಲಿ ಹಲವು ತೊಡಕುಗಳಿಂದ ಕಾಮಗಾರಿಗಳು ನಡೆಯಲಿಲ್ಲ ಎಂದು ಹೇಳಿದರು.

ಇದೀಗ ಜಿಲ್ಲಾಧಿಕಾರಿಗಳು ವಾಲಿಬಾಲ್ ಕ್ರೀಡೆ ಹಾಗೂ ಕನ್ನಡ ಭವನ ನಿರ್ಮಿಸಲು ಅನುಕೂಲವಾಗುವಂತೆ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಇರುವ 36 ಗುಂಟೆ ಸ್ಥಳದಲ್ಲಿ 17 ಗುಂಟೆ ಕನ್ನಡ ಭವನಕ್ಕೆ ಉಳಿದ ಸ್ಥಳ ಕ್ರೀಡೆಗೆ ಎಂದು ಹೇಳಲಾಗುತ್ತಿದೆ. ಕಡಿಮೆ ಸ್ಥಳದಿಂದ ಕ್ರೀಡೆಯ ಅಭ್ಯಾಸಕ್ಕೆ ತೊಡಕಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಗರದ ೧ ಕಿ.ಮೀ ವ್ಯಾಪ್ತಿಯಲ್ಲಿ ಉತ್ತಮ ಸ್ಥಳವಿದ್ದು, ಪೂರಕವಾದ ಪಾರ್ಕಿಂಗ್ ವ್ಯವಸ್ಥೆಗೂ ಅನುಕೂಲಕರವಾಗಿರುವ ಜಾಗ ದೊರೆಯಲಿದೆ. ಅಂತ ಸ್ಥಳಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮುಂದಾಗಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಸೋಮಶೇಖರ್, ರೈತ ಮುಖಂಡ ಕೆ.ಬೋರಯ್ಯ, ಬಾಸ್ಕೆಟ್‌ಬಾಲ್ ಸಂಸ್ಥೆಯ ಕಾರ್ಯದರ್ಶಿ ಸತ್ಯ, ಜೂಡೋ ಸಂಸ್ಥೆಯ ಕಾರ್ಯದರ್ಶಿ ಜಿ.ಕುಬೇರ ನಾರಾಯಣ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ