Thursday, July 25, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಸಚಿವ HDK ಮನವಿಗೆ ಸ್ಪಂದಿಸಿದ ಧರ್ಮೇಂದ್ರ ಪ್ರಧಾನ್: ಮಂಡ್ಯ ಕೇಂದ್ರೀಯ ವಿದ್ಯಾಲಯಕ್ಕೆ ಶೀಘ್ರ ಕಾಯಂ ಶಿಕ್ಷಕರ ನೇಮಕ

ಮಂಡ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದರು ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಮನವಿಗೆ ತಕ್ಷಣವೇ ಸ್ಪಂದಿಸಿರುವ ಅವರು; ಬಹಳ ದಿನಗಳಿಂದ ಕಾಯಂ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಆಗಿತ್ತು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು. ಅವರ ಮನವಿಗೆ ಮಾನ್ಯತೆ ಕೊಟ್ಟು ಆದಷ್ಟು ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗುವುದು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಶಾಲಾ ಕಟ್ಟಡ ನಿರ್ಮಾಣ

ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಡ್ಯ ಕೇಂದ್ರೀಯ ವಿದ್ಯಾಲಯದಲ್ಲಿ ಕಟ್ಟಡ ಹಾಗೂ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣದ ಬಗ್ಗೆಯೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಭರವಸೆ ನೀಡಿದ್ದಾರೆ.

ಕಾಲಮಿತಿಯೊಳಗೆ ನಿರ್ಮಾಣ ಕಾಮಗಾರಿಗಳನ್ನು ಪೂರೈಸಿ ಕೊಡಲಾಗುವುದು ಎಂದು ಅವರು ತಿಳಿಸಿದ್ದು, ಈ ಬಗ್ಗೆ ಶಿಕ್ಷಣ ಸಚಿವರು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!