ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಮತೆ ನಾಮಪತ್ರ ಸಲ್ಲಿಸಲು 5 ನೇ ದಿನವಾದ ಬುಧವಾರ (ಮಾ.3) 7 ಅಭ್ಯರ್ಥಿಗಳಿಂದ ಒಟ್ಟು 9 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್. ಟಿ.ವಿ – 1 ನಾಮಪತ್ರ, ಲೋಕ ಶಕ್ತಿ ಪಕ್ಷದ ಅಭ್ಯರ್ಥಿಯಾಗಿ ಎನ್. ಬಸವರಾಜು – 01 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಲೋಲ – 01 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಶಿವನಂಜಪ್ಪ – 01 ನಾಮಪತ್ರ, ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಿವಶಂಕರ್ ಎಸ್ – 3 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ರಾಮಯ್ಯ ಡಿ – 1 ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಶೇಖರ ಕೆ. ಆರ್ – 1 ನಾಮಪತ್ರ ಸಲ್ಲಿಸಿದ್ದಾರೆಂದು ಅವರು ಮಾಹಿತಿ ನೀಡಿದ್ದಾರೆ.




