ಮಂಡ್ಯ ನಗರಸಭೆ ವತಿಯಿಂದ ಅಕ್ಟೋಬರ್ 16 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಹಳೇನಗರ, ಪೇಟೆ ಬೀದಿಯಲ್ಲಿ ನಿರ್ಮಿಸಲಾಗಿರುವ ಶ್ರೀಜಯಚಾಮರಾಜೇಂದ್ರ ಒಡೆಯರ್ ಮಾರುಕಟ್ಟೆ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಉಪಸ್ಥಿತರಿರುವರು.
ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ಎಂ.ಬಿ ರಮೇಶ್ ಬಂಡಿಸಿದ್ದೇಗೌಡ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕಪಿ.ಎಂ ನರೇಂದ್ರಸ್ವಾಮಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಉಪಸ್ಥಿತರಿರುವರು.
ಮಂಡ್ಯ ಶಾಸಕ ಪಿ ರವಿಕುಮಾರ್ ಅಧ್ಯಕ್ಷತೆ ವಹಿಸುವರು. ಮಂಡ್ಯ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ ಪ್ರಸ್ತಾವಿಕ ನುಡಿ ನುಡಿಯುವರು.
ವಿಧಾನ ಪರಿಷತ್ ಶಾಸಕರಾದಮಧು ಜಿ ಮಾದೇಗೌಡ, ಕೆ. ವಿವೇಕಾನಂದ, ಮೈ ಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರ್, ಮಂಡ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ಮಂಡ್ಯ ನಗರಸಭೆ ಉಪಾಧ್ಯಕ್ಷ ಎಂ ಪಿ ಅರುಣ್ ಕುಮಾರ್, ಮಂಡ್ಯ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರವಿ.ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ದೀಪಾ ಚೋಳನ್, ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿಸಿ ಶಿವಾನಂದ ಮೂರ್ತಿ ಅವರು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.




