ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಚ್.ಎನ್.ಗೋಪಾಲ ಕೃಷ್ಣ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಎಸ್.ಅಶ್ವತಿ ಅವರನ್ನು ಪಶು ಸಂಗೋಪನ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಡಾ.ಎಚ್.ಎನ್.ಗೋಪಾಲಕೃಷ್ಣ ಅವರನ್ನು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಶ್ವತಿ ಅವರು ನೂತನ ಜಿಲ್ಲಾಧಿಕಾರಿ ಡಾ.ಗೋಪಾಲ ಕೃಷ್ಣ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಅಶ್ವತಿ ಅವರಿಗೆ ಹೂಗುಚ್ಛ ನೀಡಿ ಶುಭ ಕೋರಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು, ನೂತನ ಜಿಲ್ಲಾಧಿಕಾರಿ ಡಾ. ಎಚ್.ಎನ್.ಗೋಪಾಲಕೃಷ್ಣ ಅವರನ್ನು ಆತ್ಮೀಯವಾಗಿ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು. ಕಸಾಪ ಮಾಜಿ ಅಧ್ಯಕ್ಷರಾದ ರೆಡ್ ಕ್ರಾಸ್ ಸಂಸ್ಥೆಯ ಮೀರಾ ಶಿವಲಿಂಗಯ್ಯ , ಡಿಸಿ ಕಚೇರಿಯ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ತಮ್ಮಣ್ಣ ಗೌಡ ಸೇರಿದಂತೆ ಮತ್ತಿತರರು ಸ್ವಾಗತಿಸಿದರು.




