Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮನೆಗಳ್ಳನ ಬಂಧನ : ಚಿನ್ನಾಭರಣ ಸೇರಿದಂತೆ 40 ಲಕ್ಷ ರೂ. ಮೌಲ್ಯದ ಮಾಲುಗಳ ವಶ

ಮನೆಗಳಿಗೆ ಕನ್ನಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ, ಆತನಿಂದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಇತರೆ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮುದಿಗೆರೆ ಗ್ರಾಮದ ಆರೋಪಿ ರಂಗೇಗೌಡ ಎಂ.ವಿ ಅಲಿಯಾಸ್ ಸಂತೋಷ ಅಲಿಯಾಸ್ ಐ.ಪಿ.ಎಲ್ ಸಂತೋಷ ಬಿನ್ ವೆಂಕಟೇಶ (37) ಎಂಬುವವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಏನಿದು ಪ್ರಕರಣ ?

ಕಳೆದ ಮೇ 20, 2025ರಂದು ನಾಗಮಂಗಲ ತಾಲ್ಲೂಕು ಬಿದರಕೆರೆ ಗ್ರಾಮದ ಗಂಗೇಗೌಡ ಅವರು ಬಿಂಡಿಗನವಿಲೆ ಪೊಲೀಸ್ ಠಾಣೆಗೆ ಹಾಜರಾಗಿ ಮೇ 18, 2025 ರಂದು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12-00 ಗಂಟೆಯ ನಡುವೆ ಮನೆ ಮುಂದೆ ಇಟ್ಟಿದ್ದ ಬೀಗದ ಕೀ ತೆಗೆದುಕೊಂಡು ಬೀಗ ತೆಗೆದು ಬಾಗಿಲನ್ನು ತೆಗೆದು ಮನೆಯೊಳಗೆ ಹೋಗಿ ಮನೆಯ ಬೀರುವಿನಲ್ಲಿದ್ದ ಸುಮಾರು 20 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 97,000 ರೂ ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದ್ದರು.

ಈ ಪ್ರಕರಣದ ತನಿಖೆಗಾಗಿ ನಾಗಮಂಗಲ ಗ್ರಾಮಾಂತರ ಠಾಣೆ ಸಿಪಿಐ ನಿರಂಜನ ಕೆ.ಎಸ್ ನೇತೃತ್ವದಲ್ಲಿ ಪಿ.ಎಸ್.ಐ ಗಳಾದ ರವಿಕುಮಾರ್. ವೈ.ಎನ್. ಮಾರುತಿ ಟಿ, ಪ್ರಶಾಂತ್ ಕುಮಾರ್, ಸಿಹೆಚ್’ಸಿಯವರಾದ ಪ್ರಶಾಂತ್ ಕುಮಾರ್, ಮಧುಕುಮಾರ, ಇಂದ್ರಕುಮಾರ್, ರವಿಕಿರಣ್. ಲೋಕೇಶ್, ಸಿಪಿಸಿ ದಿನೇಶ್ ಅವನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು.

ಈ ತಂಡವು ಆರೋಪಿಯ ಬೆನ್ನತ್ತಿ ಜೂ.1, 2025 ರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಹಾಸನ ಟೌನ್‌ನಲ್ಲಿ ಎಂ.ಓ ಅಸಾಮಿಯಾದ ಆರೋಪಿ ರಂಗೇಗೌಡನನ್ನು ವಶಕ್ಕೆ ಪಡೆದಿದೆ. ಈತ ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಪ್ರಕರಣಗಳಲ್ಲಿ, ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1, ತುರುವೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಹಾಗೂ ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಮಾಹಿತಿ ನೀಡಿದರು.

ಆರೋಪಿಯಿಂದ 490 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ ಕೃತ್ಯವೆಸಗಲು ಬಳಸಿದ್ದ ಟಿವಿಎಸ್ ಆವೆನೆಸ್ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ ಸುಮಾರು 40ಲಕ್ಷ (ನಲವತ್ತು ಲಕ್ಷ) ರೂ.ಗಳಾಗಿರುತ್ತದೆ ಎಂದು ತಿಳಿಸಿದರು.

ನಾಗಮಂಗಲ ಗ್ರಾಮಾಂತರ ವೃತ್ತದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಶ್ಲಾಘಿಸಿ ಪ್ರಶಂಸಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ