Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ನಿಧನ

ಮಂಡ್ಯ ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹಾಗೂ ಮ್ಯಾನ್ಯುಯಲ್ ಸ್ಕಾವೆಂಜಿಂಗ್ ಸಮಿತಿ ಸದಸ್ಯ ಎನ್.ನಾಗರಾಜ್ (55)ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.ಇಂದು ಬೆಳಗಿನ ಜಾವ 2 ಗಂಟೆಗೆ ಎದೆನೋವು ಕಾಣಿಸಿಕೊಂಡೊಡಣೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೂ ಮುನ್ನಾವೆ ಸಾವನ್ನಪ್ಪಿದ್ದಾರೆಂದು ವೈದ್ಯರು ಧೃಡೀಕರಿಸಿದ್ದಾರೆ.

ಮಂಡ್ಯ ನಗರಸಭೆಯಲ್ಲಿ ಪೌರಕಾರ್ಮಿಕರಾಗಿದ್ದ ನಾಗರಾಜ್ ಕಳೆದ ಎರಡು ದಶಕಗಳಿಂದ ಜಿಲ್ಲೆಯ ಪೌರಕಾರ್ಮಿಕರ ಕನಿಷ್ಠ ವೇತನ ಹಾಗೂ ಖಾಯಂಗಾಗಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು.

ಪೌರಕಾರ್ಮಿಕರ ಪರವಾಗಿನ ಹೋರಾಟದಲ್ಲಿ 2009ರಲ್ಲಿ ಸೆರೆವಾಸ ಸಹ ಅನುಭವಿಸಿದ್ದ ನಾಗರಾಜ್ ನೆಹರು ನಗರದ ಪೌರಕಾರ್ಮಿಕರ ಕಾಲೋನಿಯಲ್ಲಿ ಪೌರಕಾರ್ಮಿಕರ ಮನೆಗಳ ನಿರ್ಮಾಣ ಸೇರಿದಂತೆ ನಗರದ ಕೊಳಗೇರಿ ನಿವಾಸಿಗಳ ಪರವಾಗಿನ ಹೋರಾಟದಲ್ಲು ಸಕ್ರಿಯರಾಗಿ ತೊಡಗಿಕೊಂಡಿದ್ದರು.

ಮೃತರ ಅಂತಿಮ ದರ್ಶನಕ್ಕಾಗಿ ಕಳೇಬರವನ್ನು ನೆಹರು ನಗರದ ಅವರ ಸ್ವಗೃಹದಲ್ಲಿ ಇರಿಸಿದ್ದು.ಸಂಜೆ ವೇಳೆಗೆ ಅಂತ್ಯಕ್ರಿಯೆ ಜರುಗಲಿದೆಯೆಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಮೂವರು ಪುತ್ರರು ಹಾಗೂ ಪತ್ನಿಯನ್ನು ಆಗಲಿದ್ದು. ಮಂಡ್ಯ ಜಿಲ್ಲಾ ಪೌರಕಾರ್ಮಿಕರ ಸಂಘವು ಸಾವಿಗೆ ತೀವ್ರ ಶೋಕ ವ್ಯಕ್ತಪಡಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ