Thursday, September 19, 2024

ಪ್ರಾಯೋಗಿಕ ಆವೃತ್ತಿ

ಮದ್ಯಪಾನ ಉತ್ತೇಜಿಸುವ ಸರ್ಕಾರಕ್ಕೆ ಗಾಂಧಿಜಯಂತಿ ಆಚರಿಸುವ ನೈತಿಕತೆ ಇಲ್ಲ- ಎಸ್.ಡಿ.ಪಿ.ಐ

ರಾಜ್ಯದಲ್ಲಿ ಹೊಸದಾಗಿ 1000 ಮದ್ಯದಂಗಡಿ ತೆರೆಯಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಮಹಾತ್ಮ ಗಾಂಧೀಜಿ ಅವರ ಜಯಂತಿ ಆಚರಿಸುವ ನೈತಿಕತೆ ಇಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ)ದ ಮಂಡ್ಯ ಜಿಲ್ಲಾಧ್ಯಕ್ಷ ಸಾದತ್ ಪಾಷ ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ಜಯಂತಿ ದಿನವಾದ ಇಂದು ಮಂಡ್ಯದ ಗಾಂಧಿ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆ ಎದುರು ಎಸ್.ಡಿ.ಪಿ.ಐ ವತಿಯಂದ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

ಮದ್ಯಪಾನಕ್ಕೆ ಉತ್ತೇಜನ ನೀಡುತ್ತಿರುವ, ರಾಜ್ಯದ ಗ್ರಾಮ, ಗ್ರಾಮದಲ್ಲೂ ಮದ್ಯದಂಗಡಿ ತೆರೆಯಲು ಹೊರಟಿರುವ ಕಾಂಗ್ರೆಸ್‌ ಸರ್ಕಾರಕ್ಕೆ, ಗಾಂಧಿ ಜಯಂತಿ ಆಚರಿಸುವ ನೈತಿಕತ ಇಲ್ಲವಾಗಿದೆ ಎಂದರು.

ಸಂಪೂರ್ಣ ಪಾನ ನಿಷೇಧ ಮಹಾತ್ಮ ಗಾಂಧಿಯವರ ಅತಿ ದೊಡ್ಡ ಕನಸಾಗಿತ್ತು. ಅವರ ತತ್ವ ಪಾಲಿಸುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಈಗಾಗಲೇ ಇರುವ ಮದ್ಯದಂಗಡಿಗಳು ಸಾಲದು ಎಂದು ರಾಜ್ಯ ಸರ್ಕಾರ ಗ್ರಾಮ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿದೆ, ಇದು ಖಂಡನೀಯ. ಇಂತಹ ಮದ್ಯಪಾನ ಪ್ರೋತ್ಸಾಹಿಸುವ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಯಾವ ನೈತಿಕತೆಯೂ ಎಂದರು.

ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಉಪಾಧ್ಯಕ್ಷ ಮುಬಾರಕ್ ಹುಸೇನ್, ಜಿಲ್ಲಾ ಕಾರ್ಯದರ್ಶಿ ಅತೀಕ್ ಅಹಮದ್, ಸದಸ್ಯರಾದ ಪಾರೂಕ್, ವಸೀಂ ಸೇರಿದಂತೆ ಮತ್ತಿತರರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!