Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ: ಹಿರಿತನ ಮತ್ತು ಪಕ್ಷ ನಿಷ್ಠೆ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಮನವಿ

ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಹಿರಿತನ ಮತ್ತು ಪಕ್ಷ ನಿಷ್ಟೆ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮುಖಂಡರಾದ ಅಮರಾವತಿ ಚಂದ್ರಶೇಖರ್,ಸಿದ್ಧಾರೂಢ ಸತೀಶ್ ಗೌಡ ಮತ್ತಿತರರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಇಂದು ಸಂಜೆ ಬೆಂಗಳೂರಿನ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಭೇಟಿ ಮಾಡಿದ ಮಂಡ್ಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹಾಗೂ ಮುಖಂಡರು ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದರು.

ಪ್ರಸ್ತುತ ಮಂಡ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ತಿಳಿಸಿದ ಮುಖಂಡರು, ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾಗಬೇಕು. ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಹಿರಿತನ ಮತ್ತು ಪಕ್ಷ ನಿಷ್ಠೆ ಪರಿಗಣಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಹಾಲಹಳ್ಳಿ ರಾಮಲಿಂಗಯ್ಯ,ಹನಕೆರೆ ಶಿವರಾಮ್, ಹೊಸಹಳ್ಳಿ ಶಿವಲಿಂಗೇಗೌಡ,ಮುಖಂಡರಾದ ಸಿದ್ದರಾಮೇಗೌಡ,ಜಬೀವುಲ್ಲಾ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ