ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್ಆರ್’ಟಿಸಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ಘಟನೆ ಇಂದು ಮಧ್ಯಾಹ್ನ ಮಂಡ್ಯ ತಾಲ್ಲೂಕಿನ ತೂಬಿನಕರೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ಬೆಂಗಳೂರಿನ ಜೆ.ಪಿ.ನಗರದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್ (51), ಪತ್ನಿ ನಿಶ್ಚಿತಾ(45), ಸುಮೇಧಿನಿ ರಾಣಿ (50) ಹಾಗೂ ಚಂದ್ರು (65) ಎಂಬ ನಾಲ್ವರು ಸಾವಿಗೀಡಾಗಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಟೋಲ್ ತಪ್ಪಿಸಲು ಕಾರು ಸರ್ವಿಸ್ ರಸ್ತೆಗೆ ಇಳಿಯುವ ಸಂದರ್ಭದಲ್ಲಿ ಹಿಂಬದಿಯಿಂದ ಕೆಎಸ್ಆರ್’ಟಿಸಿ ಓಲ್ವಾ ಬಸ್ಸು ಟಾಟಾ ಪಂಚ್ ಕಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ಧಾರೆ.




