Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ವಿಶ್ವವಿದ್ಯಾಲಯ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ

ಮಂಡ್ಯ ವಿಶ್ವವಿದ್ಯಾಲಯದ ಅಭಿವೃದ್ದಿಗೆ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ವಿಧ್ಯಾಭ್ಯಾಸ ನಡೆಸಿದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ತಿಳಿಸಿದರು.

ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯ ಸಂಬಂಧ ಪೂರ್ವ ಭಾವಿ ಸಭೆ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಹಿರಿಯ ವಿದ್ಯಾರ್ಥಿಗಳನ್ನು ಒಂದು ಕಡೆ ಕ್ರೋಢೀಕರಿಸಿ ಅವರ ಸಲಹೆಯನ್ನು ತೆಗೆದುಕೊಂಡು ಮಂಡ್ಯ ವಿಶ್ವವಿದ್ಯಾಲಯಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಇನ್ನಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂಬುದು ನಮ್ಮೆಲ್ಲರ ಮನದಾಸೆಯಾಗಿದೆ ಎಂದರು.

ಅಕ್ಟೋಬರ್ 22 ರಂದು ಬೆಳಿಗ್ಗೆ 11ಗಂಟೆಗೆ ಆಡಳಿತ ಭವನದಲ್ಲಿ ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಸಭೆಯನ್ನು ಆಯೋಜಿಸಿ ಸದಸ್ಯತ್ವದ ನೋಂದಣಿಯ ಪ್ರಕ್ರಿಯೆ ಆರಂಭಿಸಲಾಗುವುದು. ಸದಸ್ಯತ್ವದ ನೋಂದಣಿಯ ನಂತರ ಹಳೆಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷರು, ಪದಾಧಿಕಾರಿಗಳನ್ನು ಚುನಾವಣೆ, ಆಯ್ಕೆ, ಅಥವಾ ಎಲ್ಲರ ಸಮ್ಮತಿಯ ಮೂಲಕ ನೇಮಕ ಮಾಡವುದಕ್ಕೆ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.

ಕಾಲೇಜು ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯವಾಗಿ ಮಾರ್ಪಾಡಾಗುವವರೆಗೆ 30 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಹಲವಾರು ವಿಧ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಹಳೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಹಕಾರವನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಕುಲಸಚಿವರಾದ ನಾಗರಾಜ್ ಜಿ.ಚೊಳ್ಳಿ, ಹಣಕಾಸು ಅಧಿಕಾರಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!