Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯಜಿಲ್ಲೆಯ ನೂತನ ಉಸ್ತುವಾರಿ ಸಚಿವ ಆರ್.ಅಶೋಕ್

ದಿಢೀರ್‌ ಬೆಳವಣಿಗೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ತೆರವುಗೊಳಿಸಿ, ಕಂದಾಯ ಸಚಿವ ಆರ್.ಅಶೋಕ್ ಅವರನ್ನು ನೇಮಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ, ದಿನಾಂಕ: 24.01.2022 ರಂದು ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು,ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಅವರನ್ನು ತೆರವು ಗೊಳಿಸಿ ಒಕ್ಕಲಿಗ ಸಮುದಾಯದ ಆರ್‌.ಅಶೋಕ್ ಅವರನ್ನು ನೇಮಕ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿರುವ ಮಂಡ್ಯ ಜಿಲ್ಲೆಗೆ ಪ್ರಭಾವಿ ಸಚಿವ ಆರ್.ಅಶೋಕ್ ನೇಮಕದ ಹಿಂದೆ ಚುನಾವಣಾ ತಂತ್ರಗಾರಿಕೆ ಅಡಗಿದೆ ಎನ್ನಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!