Tuesday, April 30, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನ| ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಂಡ್ಯನಗರ ಸಜ್ಜು

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮನಕ್ಕೆ ಸಕ್ಕರೆ ನಗರ ಮಂಡ್ಯ ಸಜ್ಜುಗೊಂಡಿದೆ. ಮಂಗಳವಾರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಡ್ಯನಗರದ ಮಂಡ್ಯ ವಿಶ್ವ ವಿದ್ಯಾಲಯದ ಆವರಣದಲ್ಲಿ ಸಜ್ಜುಗೊಳ್ಳುತ್ತಿರುವ ಬೃಹತ್ ವೇದಿಕೆಯ ನಿರ್ಮಾಣ ಕಾರ್ಯದ ಸಿದ್ದತೆಯನ್ನು ಪರಿಶೀಲನೆ ನಡೆಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಿರುಸಿನ ಪ್ರಚಾರ ನಡೆಸುತ್ತಿದ್ದು ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮಂಡ್ಯದಲ್ಲಿ ನಾಳೆ ಬೃಹತ್ ಸಮಾವೇಶದ ಮೂಲಕ ಮತಯಾಚನೆ ಮಾಡಲಿದ್ದಾರೆ.
ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ಮಾಡಲಿದ್ದಾರೆ.

ಹೊಸ ಹುಮ್ಮಸ್ಸು ತರಲಿದೆ

ಸಮಾವೇಶದ ಕುರಿತು ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿ, ಭಾರತ್ ಜೋಡೋ ಯಾತ್ರೆ ನಂತರ ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಲೋಕಸಭಾ ಚುನಾವಣೆಯ ಪ್ರಚಾರವನ್ನು ಮಾಡುತ್ತಿರುವುದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತರಲಿದೆ ಎಂದರು.

1 ಲಕ್ಷ ಜನತೆ ಭಾಗವಹಿಸುವ ನಿರೀಕ್ಷೆ

ಏ.17ರಂದು ಮಧ್ಯಾಹ್ನ 1:30 ರಿಂದ 2 ಗಂಟೆಯೊಳಗೆ ವೇದಿಕೆಗೆ ರಾಹುಲ್ ಗಾಂಧಿ ರವರು ಆಗಮಿಸಲಿದ್ದು, ಅಂದಾಜು 75 ಸಾವಿರದಿಂದ ರಿಂದ 1 ಲಕ್ಷ ಜನತೆ ಭಾಗವಹಿಸಲಿದ್ದಾರೆ, ಪಕ್ಷದ ಕಾರ್ಯಕರ್ತರು ಮುಖಂಡರು ಸಕಾಲಕ್ಕೆ ಆಗಮಿಸುವಂತೆ ಮನವಿ ಮಾಡಿದರು.

ಸಿಎಂ ಆಗಮನ

ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜಿವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್,ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇ ಗೌಡ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದು ಮೈಸೂರು ಕೊಡಗು ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್, ಹಾಸನ ಅಭ್ಯರ್ಥಿ ಶ್ರೇಯಸ್ ಪಟೇಲ್, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಭಾಗಿಯಾಗುವ ಸಾಧ್ಯತೆ ಇದೆ ಎಂದರು.

ಹೆಚ್.ಡಿ.ಕೆ ಮಾತು ಅಕ್ಷಮ್ಯ

ಮಹಿಳೆಯರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಆಡಿರುವ ಮಾತು ಅಕ್ಷಮ್ಯ ಅಪರಾಧ, ಇದಕ್ಕೆ ಕ್ಷಮೆ ಇಲ್ಲ, ವಿಷಾದ ಎಲ್ಲಿಂದ ಬಂತು, ಮಹಾತ್ಮ ಗಾಂಧಿ ಪ್ರತಿಮೆ ಎದುರು ಒಂದು ದಿನ ವಿಪಾಸ ಇದ್ದು,ಕ್ಷಮೆ ಯಾಚಿಸಿ ಪಶ್ಚಾತಾಪ ಪಟ್ಟರು ಅದಕ್ಕೆ ಕ್ಷಮೆ ಇರಲ್ಲ ಅವರ ಮಾಡಿರುವ ತಪ್ಪು ಆ ಮಟ್ಟದಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಏನ್ ಚೆಲುವರಾಯಸ್ವಾಮಿ ತಿಳಿಸಿದರು.

ಸುಮಲತಾ ಅಂಬರೀಶ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಾರದಿರುವುದು, ತಟಸ್ಥವಾಗಿ ಉಳಿದುಕೊಂಡಿರುವುದು, ಅವರ ಪಕ್ಷಕ್ಕೆ ಸೇರಿದ ವಿಚಾರ, ಅದರ ಬಗ್ಗೆ ನನಗೇನು ಮಾಹಿತಿ ಇಲ್ಲ.
ಪ್ರತಿಪಕ್ಷ ನಾಯಕ ಆರ್ ಅಶೋಕ್ ಕುಮಾರಸ್ವಾಮಿ ತಪ್ಪು ಮಾಡಿಲ್ಲ ಅನ್ನುತ್ತಾರೆ, ಮತ್ತೆ ಯಾಕೆ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಶ್ನಿಸಿದರು.

ನಾಲೆ ಆಧುನೀಕರಣ ಕಾಮಗಾರಿ

ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದೆ, ಹಾಗಾಗಿ ನಾಲೆಗಳಲ್ಲಿ ನೀರು ಹರಿಸಲು ಸಾಧ್ಯವಿಲ್ಲ, ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು, ಮಳೆಯನ್ನ ನಂಬಿದ್ದೇವೆ, 20ರ ನಂತರ ಮಳೆಯಾಗುವ ಮುನ್ಸೂಚನೆ ಇದ್ದು, ವರುಣನ ಕೃಪೆಯಿಂದ ಸಂಕಷ್ಟ ಪರಿಸ್ಥಿತಿ ದೂರ ಆಗಲಿ ಎಂದು ಆಶಿಸಿದರು.

ಶಾಸಕ ರವಿಕುಮಾರ್ ಗಣಿಗ, ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್, ಕಾರ್ಯಾಧ್ಯಕ್ಷ ಎಂ ಎಸ್ ಚಿದಂಬರ್ ಪದ್ದು ಬಾಷೆಯಲ್ಲಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!