Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದ ಬಗ್ಗೆ ಸರ್ಕಾರದ ಮಲತಾಯಿ ಧೋರಣೆ : ಮಹಾಲಿಂಗೇಗೌಡ

ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಬಿಜೆಪಿ ಸರ್ಕಾರವು ಅಗತ್ಯ ಅನುದಾನ ಬಿಡುಗಡೆ ಮಾಡದೇ, ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇಗೌಡ ಆರೋಪೀಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯನಗರದಲ್ಲಿ ರಸ್ತೆ ಗುಂಡಿಗೆ ಮಾಜಿ ಯೋಧ ಬಲಿಯಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ, ಸರ್ಕಾರ ಕಮಿಷನ್ ದಂಧೆಯಲ್ಲಿ ನಿರತವಾಗಿದೆ, ಇದೇ ರೀತಿ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದರು.

ಅನುದಾನ ವಾಪಸ್ ಪಡೆದ ಸರ್ಕಾರ

ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ನಗರದ ರಸ್ತೆ ಅಭಿವೃದ್ಧಿಗಾಗಿ ಸುಮಾರು 50 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದರು, ಆದರೆ ಆಪರೇಷನ್‌ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಈ ಅನುದಾನವನ್ನು ವಾಪಸ್ಸು ಪಡೆಯಿತ್ತು, ಬಿಜೆಪಿ ಸರ್ಕಾರ ಅನುದಾನ ವಾಪಸ್ಸು ಪಡೆಯದಿದ್ದರೆ ಇವತ್ತು ಈ ದೇಶ ಕಾದ ಯೋಧನಿಗೆ ಸಾವು ಸಂಭವಿಸುತ್ತಿರಲ್ಲಿಲ್ಲ ಹಾಗೂ ರೈತರು, ಸಾರ್ವಜನಿಕರು ಅಪಘಾತದಿಂದ ಪಾರಾಗುತ್ತಿದ್ದರು ಎಂದರು.

ರೈತರಿಗೆ ಸ್ಪಂದಿಸದ ಬಿಜೆಪಿ ಸರ್ಕಾರ 

ರೈತರು ಈಗಾಗಲೇ ಕಬ್ಬಿಗೆ 4.500 ರೂ.ನಿಗದಿಗೊಳಿಸುವಂತೆ ಮಂಡ್ಯದಲ್ಲಿ ಕಳೆದ 13 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ, ರೈತರ ಸಮಸ್ಯೆಗಳನ್ನು ಕೇಳಲು ಸರ್ಕಾರದ ಯಾವ ಪ್ರತಿನಿಧಿಗಳು ಆಗಮಿಸದೇ ಇರುವುದು ನಾಚಿಗೇಡಿನ ಸಂಗತಿ ಎಂದರು.

ತಕ್ಷಣ ರೈತರ ಬೇಡಿಕೆಗಳಾದ ಪ್ರತಿಟನ್ ಕಬ್ಬಿಗೆ ರೂ.4,500 ರೂ., ಪ್ರತಿ ಲೀಟರ್ ಹಾಲಿಗೆ  ರೂ. 40 ನಿಗದಿ ಮಾಡಬೇಕು. ಕೂಡಲೇ ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಮಂತ್ರಿಗಳು ಮತ್ತು ಅಧಿಕಾರಗಳ ಜೊತೆ ಚೆರ್ಚೆ ಮಾಡಿ ಸೂಕ್ತ ಬೆಂಬಲ ಬೆಲಯನ್ನು ನಿಗಧಿ ಪಡಿಸಬೇಕೆಂದು ಆಗ್ರಹಿಸುತ್ತೇನೆ ಆಗ್ರಹಿಸಿದರು.

ಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಅನಿಲ್ ಕುಮಾರ್, ಶಶಿಕುಮಾರ್ ಹಾಗೂ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ