Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ವಿವಿ ವಿಲೀನ ಮಂಡ್ಯ ಅಸ್ಮಿತೆಗೆ ಧಕ್ಕೆ ತಂದಿದೆ ; ಆರ್.ಅಶೋಕ್

ಮೈಸೂರು ವಿಶ್ವವಿದ್ಯಾಲಯದೊಂದಿಗೆ ಮಂಡ್ಯ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರ ಮಂಡ್ಯ ಅಸ್ಮಿತೆಗೆ ಧಕ್ಕೆ ತಂದಿದೆ. ಬಿಜೆಪಿ ಅವಧಿಯಲ್ಲಿ ನೀಡಿದ ವಿಶ್ವವಿದ್ಯಾಲಯವನ್ನು ಕಸಿದುಕೊಳ್ಳುವುದಕ್ಕೆ ಕಾಂಗ್ರೆಸ್ ಸಂಚು ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮಂಡ್ಯ ವಿಶ್ವವಿದ್ಯಾಲಯವನ್ನು ಮೈಸೂರು ವಿಶ್ವವಿದ್ಯಾಲಯದೊಂದಿಗೆ ವಿಲೀನಗೊಳಿಸುತ್ತಿರುವುದನ್ನು ವಿರೋಧಿಸಿ ಇಂದು ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಯಲ್ನಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಸರ್ಕಾರ ಪಾಪರ್ ಆಗಿದೆ. ವಿಧಾನಸೌಧದ ಮುಂದೆ ನಿಂತು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲಾಗದೆ ದಲಿತರ ಹಣಕ್ಕೆ ಕನ್ನ ಹಾಕಿರುವ ಸಿದ್ದರಾಮಯ್ಯ ಅವರದ್ದು ಢೋಂಗಿ ಸರ್ಕಾರ ಎಂದು ಕುಟುಕಿದರು.

ಮಂಡ್ಯಕ್ಕೆ ವಿವಿ ಅವಶ್ಯಕತೆ ಇಲ್ಲ, ಅದು ಲಾಭದಾಯಕವೂ ಆಗಿಲ್ಲ ಎಂದು ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಲಾಭವನ್ನೇ ನೋಡುವುದಾದರೆ ವಿವಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟುಬಿಡಿ. ಅದರಿಂದ ಒಳ್ಳೆಯ ಲಾಭ ಬರುತ್ತದೆ ಎಂದು ಲೇವಡಿ ಮಾಡಿದ ಅಶೋಕ್, ಲಾಭ-ನಷ್ಟದ ಲೆಕ್ಕ ಹಾಕುವುದಕ್ಕೆ ಶಿಕ್ಷಣ ವ್ಯಾಪಾರದ ಸರಕಲ್ಲ, ಶಿಕ್ಷಣ ನಮ್ಮ ದೇಶದ ಆಸ್ತಿ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಜಿಲ್ಲೆಯಲ್ಲಲಿರುವ ೬ ಜನ ಕಾಂಗ್ರೆಸ್ ಶಾಸಕರಿಗೆ ಒಂದು ವಿವಿ ಉಳಿಸಿಕೊಳ್ಳುವ ಯೋಗ್ಯತೆ ಇಲ್ಲವೆಂದಾದರೆ ಅವರೆಲ್ಲಾ ಏಕಿರಬೇಕು. ಮಂಡ್ಯ ವಿದ್ಯಾರ್ಥಿಗಳು ವಿದ್ಯಾವಂತರಾಗುವುದು ಬೇಡವೆಂದು ಘೋಷಿಸಿಬಿಡಿ ಎಂದು ಆಕ್ರೋಶದಿಂದ ನುಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ವಿದ್ಯೆ ಕಿತ್ತುಕೊಂಡಿತು. ಅಬಕಾರಿ ಸಚಿವರು ಮುಚ್ಚಿರುವ ಬಾರ್ ಓಪನ್ ಮಾಡಿದರು. ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ತೆರೆಯಲಾದ ವಿವಿಗಳನ್ನು ಮುಚ್ಚುತ್ತಿರುವ ಈ ಸರ್ಕಾರಕ್ಕೆ ಮಾನ-ಮರ್ಯಾದೆ ಇದೆಯೇ. ಹಣ ಇಲ್ಲ ಎಂಬ ಕಾರಣಕ್ಕೆ ಮುಚ್ಚುತ್ತಿರುವುದಾಗಿ ಹೇಳುತ್ತಿರುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಕೆ.ಸಿ. ನಾರಾಯಣಗೌಡ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ಮುಖಂಡರಾದ ಇಂಡುವಾಳು ಎಸ್.ಸಚ್ಚಿದಾನಂದ, ಡಾ. ಸಿದ್ದರಾಮಯ್ಯ , ಬಿ.ಆರ್. ರಾಮಚಂದ್ರ, ಕನ್ನಡ ಸೇನೆ ಮಂಜುನಾಥ್, ಅಶೋಕ್ ಜಯರಾಂ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ