ಮೈಷುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕ ಪ್ರಭಾರ ದಲ್ಲಿರಿಸಿ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಇವರನ್ನು ನೇಮಕ ಮಾಡಿದೆ.
ಮೈಶುಗರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಅಧಿಕ ಪ್ರಭಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಎನ್.ವೀಣಾ ಅವರನ್ನು ಅಧಿಕ ಪ್ರಭಾರದಿಂದ ಬಿಡುಗಡೆಗೊಳಿಸಲಾಗಿದೆ.
ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದವರಾಗಿದ್ದು, ಏ.11 ರ ಶುಕ್ರವಾರ ಮೈಷುಗರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.




