ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜಸ್ಥಾನ ಮೂಲದ ಮಹಿಳಾ ಪೊಲೀಸ್ ಬಿ ಇನ್ಸ್ಪೆಕ್ಟರ್ ಒಬ್ಬರು ಬುಧವಾರ ಬಂದರು ಟ್ರಸ್ಟಿನ ಮುಖ್ಯಘೇಟಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನವ ಮಂಗಳೂರು ಕೋರ್ಟ್ ಟ್ರಸ್ಟ್ ನ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿಬಾಯಿ ಎಂಬವರು ಬೆಳಗ್ಗೆ 6 ರಿಂದ 6:15 ರ ನಡುವೆ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜ್ಯೋತಿಯವರ ಪತಿ ಓಂ ಬೀರ್ ಸಿಂಗ್ ಅವರು ಮಂಗಳೂರು ರಿಫೈನರಿ ಪೆಟ್ರೋ ಕೆಮಿಕಲ್ ಲಿಮಿಟೆಡ್ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಔಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ




