Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮನೀಷ್ ಸಿಸೋಡಿಯಾ ಬಂಧನ : ಅಮ್ ಆದ್ಮಿ ಖಂಡನೆ

ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಬಂಧನವನ್ನು ಖಂಡಿಸಿ ಅಮ್ ಆದ್ಮಿ ಪಕ್ಷದ ಜಿಲ್ಲಾ ಉಸ್ತುವಾರಿ ಮುಖಂಡರಾದ ಬೂದನೂರು ಬೊಮ್ಮಯ್ಯ ಇಂದು ಪತ್ರಿಕಾಗೋಷ್ಠಿ ನಡೆಸಿದರು.

ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ. ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು ಎಂದರು.

ಸುಮಾರು ಒಂದು ವರ್ಷದಿಂದ ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ಮನೀಷ್ ಸಿಸೋಡಿಯಾರವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದರೂ, ಆರೋಪವನ್ನು ಸಾಬೀತು ಪಡಿಸುವಂತಹ ಯಾವುದೇ ಸಣ್ಣ ಸಾಕ್ಷಿ ಸಿಕ್ಕಿಲ್ಲ, ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್ ಆದಿ ಪಾರ್ಟಿ ಒಂದೇ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುದನ್ನು ಅರಿತಿರುವ ಬಿಜೆಪಿಯು ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ತೊಂದರೆ ನೀಡುತ್ತಿದೆ ಎಂದು ಕಿಡಿಕಾರಿದರು.

“ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಮ್ ಅದ್ದಿ ಪಾರ್ಟಿ ಪ್ರವರ್ಧಮಾನಕ್ಕೆ ಬರುತ್ತಿದೆ. ಜನರು ಎಎಪಿ ಪರವಾಗಿ ಇರುವುದನ್ನು ಸಹಿಸಿಕೊಳ್ಳದ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಚುನಾವಣಾ ಪ್ರಚಾರಕ್ಕೆ ಮನೀಷ್ ಸಿಸೋಡಿಯಾ ಆಗಮಿಸಿ ಇಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಪ್ರಶ್ನಿಸಬಹುದೆಂಬ ಭಯದಿಂದ ಕೇಂದ್ರ ಸರ್ಕಾರವು ಸಿಬಿಐ ಮೂಲಕ ಅವರನ್ನು ಬಂಧಿಸಿದೆ. ದೇಶ ಹಾಗೂ ಜನರಿಗೋಸ್ಕರ ಕೇವಲ ಬಂಧನ ಮಾತ್ರವಲ್ಲ, ಪಾಣ ನೀಡಲು ನಾವು ಸಿದ್ಧವಿದ್ದೇವೆ” ಎಂದು ಹೇಳಿದರು.

ಮಂಡ್ಯ ಅಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಶಿವಕುಮಾರ್ ಮಾತನಾಡಿ,  “ಆಮ್ ಆದಿ ಪಾರ್ಟಿಯ ದೆಹಲಿ ಸರ್ಕಾರದ ಶಿಕ್ಷಣ ಕಾಂತ್ರಿಯನ್ನು ಕಂಡು ಅನೇಕ ವಿದೇಶಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಬಿಜೆಪಿ ಮಾತ್ರ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಸಚಿವರಾಗಿ ಮನೀಷ್ ಸಿಸೋಡಿಯಾರವರು ಬರೋಬ್ಬರಿ 25,000ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಸುಮಾರು 20 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತವರ ವಿರುದ್ಧ ಬಿಜೆಪಿಯು ಈ ರೀತಿ ಕೀಳು ಮಟ್ಟದ ಕುಂತಂತ್ರವನ್ನು ಮಾಡುತ್ತಿರುವುದು ಖಂಡನೀಯ. ಗಿಡವನ್ನು ಚಿವುಟಿದಷ್ಟೂ ಚಿಗುರುವಂತೆ ಆಮ್ ಆದಿ ಪಾರ್ಟಿ ಕೂಡ ಬಿಜೆಪಿ ತೊಂದರೆ ನೀಡಿದಷ್ಟೂ ಹೆಚ್ಚಿನ ವೇಗದಲ್ಲಿ ಬೆಳಯಲಿದೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ , ಮಳವಳ್ಳಿಯ ಎಂ.ಬಿ. ಅಭಿಷೇಕ್‌, ಮುಖಂಡರಾದ ಆನಂದ್‌, ಜೆಸಿಬಿ ಕುಮಾರ್ ಹಾಗೂ ಪುಟ್ಟಸ್ವಾಮಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!