Thursday, September 19, 2024

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳದ ಮಂಜುನಾಥೇಶ್ವರ ದೇವಾಲಯ ನೋಂದಣಿಯೇ ಆಗಿಲ್ಲ!: ಆರ್‌ಟಿಐನಿಂದ ಮಾಹಿತಿ ಬಹಿರಂಗ

ಧರ್ಮಸ್ಥಳದ ಮಂಜುನಾಥೇಶ್ವರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಾವಣೆಯೇ ಆಗಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ. ಇದು ಧರ್ಮಾದಾಯ ದತ್ತಿ ಅಧಿನಿಯಮದ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ದತ್ತಿ ತಹಶೀಲ್ದಾರ್‌ ಅವರು, ”ಮಂಜುನಾಥೇಶ್ವರ ದೇವಸ್ಥಾನವು ನೋಂದಾವಣೆಯೇ ಅಗಿಲ್ಲ” ಎಂದು ಆರ್‌ಟಿಐ ಅಡಿಯಲ್ಲಿ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಮಂಜುನಾಥ ದೇಗುಲವು ಧಾರ್ಮಿಕ ಸಂಸ್ಥೆ, ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಾವಣೆಯೇ ಆಗಿಲ್ಲವೆಂದು ಸರ್ಕಾರವು ನೀಡಿರುವ ಉತ್ತರವು ಭಾರೀ ಚರ್ಚೆಯಾಗುತ್ತಿದೆ.

ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್ ಅವರು, ”ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಾವಣೆ ಮಾಡಿರುವ ಪ್ರತಿಯನ್ನು ಕೋರಿ ಮಾಹಿತಿ ಹಕ್ಕಿನಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಆರ್‌ಟಿಐ ಅರ್ಜಿಗೆ 2023ರ ಅಕ್ಟೋಬರ್ 18ರಂದು ಮಾಹಿತಿ ನೀಡಿದ್ದಾರೆ.

ಸರ್ಕಾರದ ಮಾಹಿತಿಯಲ್ಲಿ ಏನಿದೆ?

”ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹೋಬಳಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಮತ್ತು ನಿಯಮ 2002ರ ಸೆಕ್ಷನ್ 53ರಂತೆ ಇದುವರೆಗೂ ನೋಂದಣಿ ಆಗಿರುವುದಿಲ್ಲ” ಎಂದು ಧಾರ್ಮಿಕ ದತ್ತಿ ತಹಶೀಲ್ದಾರ್‌ ಅವರು ಮಾಹಿತಿ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!