ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಮನ್ ಮುಲ್ ನಿರ್ದೇಶಕ ಹೆಚ್.ಟಿ.ಮಂಜು ತೀವ್ರ ವಾಗ್ದಾಳಿ ನಡೆಸಿದರು.
ಕೆ .ಆರ್.ಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರು ಮಾತೃಪಕ್ಷ ಜೆಡಿಎಸ್ ಪಕ್ಷಕ್ಕೆ ಮತ ನೀಡದೇ ಅನ್ಯ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ನೇರವಾಗಿ ಆರೋಪ ಮಾಡಿದ್ದರು.
ಇದಕ್ಕೆ ಶಾಸಕ ಶ್ರೀನಿವಾಸ್, ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದರಿಂದ ರೊಚ್ಚಿಗೆದ್ದ ತಾಲೂಕು ಜೆಡಿಎಸ್ ಕಾರ್ಯಕರ್ತರು ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಛೀಮಾರಿ ಹಾಕಿದ್ದಾರೆ. ಗುಬ್ಬಿ ಶ್ರೀನಿವಾಸ್ ಅವರಿಗೆ ಜೆಡಿಎಸ್ ವರಿಷ್ಠರ ವಿರುದ್ಧ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಶ್ರೀನಿವಾಸ್ ಅವರು ಜೆಡಿಎಸ್ ಪಕ್ಷದಿಂದ ಗೆದ್ದಿರುವುದರಿಂದ ಮೊದಲು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ನಂತರ ಮಾತನಾಡಲಿ.ಇನ್ನೂ ಸಹ ಜೆಡಿಎಸ್ ಪಕ್ಷದ ಹಂಗಲ್ಲಿರುವ ನೀನು ನಮ್ಮ ಪಕ್ಷದ ಬಗ್ಗೆ , ನಾಯಕರ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದೇ ಹೋದರೆ ನೀ ಕಂಡಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಕಲ್ಲಿನಲ್ಲಿ ಒಡೆಯುತ್ತಾರೆ ಎಂಬುದನ್ನು ಮರೆಯಬೇಡ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಬಲದೇವ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಬಿ. ಧನಂಜಯ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ವಕೀಲ ಕುರುಬಹಳ್ಳಿ ನಾಗೇಶ್, ಜಿ.ಪಂ.ಮಾಜಿ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ,ಬಲ್ಲೇನಹಳ್ಳಿ ನಂದೀಶ್,ಡಿ ಆರ್ ಮರಿಸ್ವಾಮಿಗೌಡ,ಸೋಮಶೇಖರ್, ಸಿಂಧಘಟ್ಟ ಗಿರೀಶ್, ಬ್ಯಾಲದಕೆರೆ ಮರಿಗೌಡ,ಸುರೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.