Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೈಸೂರು|ವಿಚಾರವಾದಿ ಮಂಟೇಲಿಂಗಯ್ಯ ನಿಧನ

ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇಲಿಂಗಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಸಂಜೆ ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ಮೈಸೂರು ನಗರದ ಕೆಸರೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯಕ್ರಿಯೆ ಮಂಗಳವಾರ (ಆ.22ರಂದು) ನಡೆಯಲಿದೆ.

ನೊಂದ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದ ಮಂಟೇಲಿಂಗಯ್ಯ ಅವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಮೈಸೂರು ದಸರಾಕ್ಕೆ ಪ್ರತಿಯಾಗಿ ಬಡವರ ದಸರಾವನ್ನು ಅದ್ದೂರಿಯಾಗಿ ಆಚರಿಸಿ ರಾಜ್ಯದ ಗಮನ ಸೆಳೆದಿದ್ದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡಿದ್ದ ಅವರು ಅಂಬೇಡ್ಕರ್ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಸದಾ ಕಾಲ ತಲುಪಿಸುತ್ತಿದ್ದರು, ಅಂಬೇಡ್ಕರ್ ವಿಚಾರವಾಗಿ ಗಂಟೆಗಟ್ಟಲೆ ಭಾಷಣ ಮಾಡುತ್ತಿದ್ದರು. ರಾಜ್ಯದ ಹಲವಾರು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅಂಬೇಡ್ಕರ್ ವಿಚಾರಧಾರೆ ಜೊತೆಗೆ ಪ್ರಗತಿಪರ ಚಿಂತನೆಯ ಕಿಚ್ಚು ಹಚ್ಚಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ