Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ಯಾರಿಸ್ ಒಲಿಂಪಿಕ್ಸ್ | 2ನೇ ಪದಕ ಬೇಟೆಯಾಡಿದ ಮನು ಭಾಕರ್- ಸರಬ್ಜೋತ್ ಜೋಡಿ

ಪ್ಯಾರಿಸ್ ಒಲಿಂಪಿಕ್ಸ್‌ 2024ರ ನಾಲ್ಕನೇ ದಿನದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಜೋಡಿ 10 ಮೀ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಬ್ಬರ ಜೋಡಿ ದಕ್ಷಿಣ ಕೊರಿಯಾ ತಂಡವನ್ನು ಮಣಿಸಿ ಜಯವನ್ನು ತಮ್ಮದಾಗಿಸಿಕೊಂಡಿದೆ.

ಭಾನುವಾರ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಜಯಿಸಿದ್ದ ಮನು ಭಾಕರ್ ಶೂಟಿಂಗ್ ರೇಂಜ್‌ನಲ್ಲಿ ಮತ್ತೊಂದು ಪದಕ ಗಳಿಸಿದ್ದಾರೆ.

ಭಾರತದ ಜೋಡಿಯು ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ಅವರನ್ನು ಸೋಲಿಸಿದೆ. ಮನು ಭಾಕರ್ ಅವರು ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟುವಾಗಿದ್ದಾರೆ.

ಹರಿಯಾಣದ ಜಜ್ಜಾರ್‌ನವರಾದ ಮನು ಭಾಕರ್ ಈ ಮೊದಲು ವಿಶ್ವಕಪ್‌ನಲ್ಲಿ 9 ಚಿನ್ನ, 2 ಬೆಳ್ಳಿ, ಯುವ ಒಲಿಂಪಿಕ್ಸ್‌ನಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಒಂದು ಚಿನ್ನವನ್ನು ಮುಡಿಗೇರಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!