Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ: ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಅವರು ತಮ್ಮ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ಅಧಿಕಾರಾವಧಿ ಜೂ.23ರವರೆಗೂ ಇತ್ತು. ಆದರೆ ಅವಧಿಗೆ ಮುನ್ನವೇ ಅಧಿಕಾರ ತ್ಯಜಿಸಿದ್ದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶೀಘ್ರವೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಜೆಡಿಎಸ್ ವರಿಷ್ಟರ ನಡೆಯಿಂದ ಅಸಮಾಧಾನಗೊಂಡು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಅವರು, ಹಲವು ತಿಂಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಅಲ್ಲದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!