Thursday, July 25, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಚಿತ್ರಕಲಾವಿದ ಮಾರ್ಕಾಲು ದೇವರಾಜು ಕಾಯಕರತ್ನ ಪ್ರಶಸ್ತಿಗೆ ಆಯ್ಕೆ

ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಮಾರ್ಕಾಲು ದೇವರಾಜು ಅವರು ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಮಂಡ್ಯ ಜಿಲ್ಲಾ ಘಟಕದ ಉಪಾಧ್ಯಕ್ಷ ಗುರುಮೂರ್ತಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳವಳ್ಳಿ ತಾಲೂಕು ಮಾರ್ಕಾಲು ಗ್ರಾಮದ ಅಂತರ ರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ದೇವರಾಜು ಮಾರ್ಕಾಲು ಅವರನ್ನು ರಾಜ್ಯ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಮಾರ್ಕಾಲು ದೇವರಾಜು ಅವರು ಪದವೀಧರರಾಗಿದ್ದು, ಏಕವ್ಯಕ್ತಿ ಚಿತ್ರಕಲ ಪ್ರದರ್ಶನ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ .ಅವರು 1991ನೇ ಸಾಲಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನೀಡುವ ಡಾ.ಬಿ ಆರ್ ಅಂಬೇಡ್ಕರ್ ರಾಷ್ಟ್ರ ಪ್ರಶಸ್ತಿ, ಬುದ್ಧ ರಾಷ್ಟ್ರೀಯ ಪ್ರಶಸ್ತಿ ,ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಗಣರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ರಾಷ್ಟ್ರ ಮತ್ತು ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.

ಅವರ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಮಂಡ್ಯ ಜಿಲ್ಲಾ ಘಟಕ ಅವರನ್ನು 2024ನೇ ಸಾಲಿನ ರಾಜ್ಯ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಇದೆ ಜುಲೈ 13ರಂದು ಬೀದರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಪರಿಷತ್ತಿನ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ, ಮಹಿಳಾ ಘಟಕದ ಉಪಾಧ್ಯಕ್ಷ ಪುಷ್ಪಲತಾ, ಸಂಘಟನಾ ನಿರ್ದೇಶಕರಾದ ಜಯರಾಮ ಹಾಗೂ ವೆಂಕಟಚಲಯ್ಯ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!