Saturday, July 13, 2024

ಪ್ರಾಯೋಗಿಕ ಆವೃತ್ತಿ

ಡಿ.ಕೆ.ಶಿವಕುಮಾರ್ ಜನ್ಮದಿನದ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮೇ ೧೫ರಂದು ಮೈಷುಗರ್ ಕಾರ್ಖಾನೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್.ಬಿ.ವಿಜಯಕುಮಾರ್ ತಿಳಿಸಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಅವರ ನೇತೃತ್ವದಲ್ಲಿ ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಎಂ.ಎಸ್.ಆತ್ಮಾನಂದ, ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ, ಮಾಜಿ ಶಾಸಕರಾದ ರಮೇಶ್‌ಬಾಬುಬಂಡಿಸಿದ್ದೇಗೌಡ, ಕೆ.ಬಿ.ಚಂದ್ರಶೇಖರ್, ಗಣಿಗ ರವಿಕುಮಾರ್, ಮಧು ಜಿ.ಮಾದೇಗೌಡ ಸೇರಿದಂತೆ ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲೆಯ ಎಲ್ಲ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಮೈಷುಗರ್ ಕಾರ್ಖಾನೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ಎಲ್ಲರೂ ಕೈಜೋಡಿಸುವ ಅವಶ್ಯಕತೆ ಇದೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಶ್ಮಿ ಶಿವಕುಮಾರ್, ಸಂತೋಷ್, ಹೀನಾ, ಶ್ರೀಧರ್, ನಿತಿನ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!