Wednesday, July 24, 2024

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಆವರಣದಲ್ಲಿ ಸ್ವಚ್ಚತಾ ಕಾರ್ಯ

ಮಂಡ್ಯದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ಇಂದು ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಯುವ ನಾಯಕ ಅಶೋಕ್ ಜಯರಾಮ್ ಭಾಗವಹಿಸಿದ್ದರು.

ಇಂದು ಬೆಳಿಗ್ಗೆ ಬಿಜೆಪಿಯ ಹಲವು ಕಾರ್ಯಕರ್ತರು ಹಾಗೂ ಸಿಬ್ಬಂದಿ ಜೊತೆಗೂಡಿ, ಪೊರಕೆ ಹಿಡಿದು ಕಸ ಗುಡಿಸಿ ಸ್ವಚ್ಚತಾ ಕಾರ್ಯದಲ್ಲಿ ಕೈಜೋಡಿಸಿದರು.ಮೈಷುಗರ್ ಕಾರ್ಖಾನೆ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿದೆ.

ರಾಜ್ಯ ಬಿಜೆಪಿ ಸರ್ಕಾರ ಕಾರ್ಖಾನೆಯ ಪ್ರಾರಂಭಕ್ಕೆ ಅನುದಾನ ಬಿಡುಗಡೆ ಮಾಡಿದ್ದು, ಮೈಷುಗರ್ ಶೀಘ್ರ ಆರಂಭವಾಗಲಿದೆ.ಈ ಹಿನ್ನಲೆಯಲ್ಲಿ ಇಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಾರ್ಖಾನೆ ಅಧ್ಯಕ್ಷ ಶಿವಲಿಂಗೇಗೌಡ ಮುಖಂಡರಾದ ಚನ್ನಪ್ಪ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!