Saturday, May 18, 2024

ಪ್ರಾಯೋಗಿಕ ಆವೃತ್ತಿ

146 ಸಂಸದರ ಅಮಾನತು| ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್ ಆಕ್ರೋಶ

ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ವಿರೋಧ ಪಕ್ಷಗಳ 146 ಜನ ಸಂಸದರನ್ನು ಅಮಾನತು ಮಾಡುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೊಲೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಮಂಡ್ಯನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಬಂದಿಗೌಡ ಬಡಾವಣೆಯ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು, ಕಾವೇರಿ ಉದ್ಯಾನವನದ ಗಾಂಧಿ ಪ್ರತಿಮೆ ಬಳಿ ತೆರಳಿ ಕೆಲಕಾಲ ಧರಣಿ ನಡೆಸಿದರು.

ಸಂಸತ್ತಿನ ಭದ್ರತೆ ಉಲ್ಲಂಘಿಸಿದ ಪ್ರಕರಣದ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಉಭಯ ಸದನಗಳಲ್ಲಿ ಒತ್ತಾಯಿಸಿದ ವಿರೋಧ ಪಕ್ಷದ 146 ಸಂಸದರನ್ನು ಅಮಾನತು ಮಾಡಿರುವ
ಲೋಕಸಭೆ ಸ್ಪೀಕ‌ರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಅವರ ಕ್ರಮ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಖಂಡಿಸಿದರು.

146 ಸಂಸದರ ಅಮಾನತು ತಲೆ ತಗ್ಗಿಸುವ ವಿಚಾರ

ಸಂಸತ್‌ನಲ್ಲಿ 2-3 ದಿನಗಳ ಕಾಲದಲ್ಲಿ ಒಟ್ಟು 146 ಸಂಸದರನ್ನು ಅಮಾನತು ಮಾಡಿರುವುದು ಸಂಸತ್ತಿನ  ಇತಿಹಾಸದಲ್ಲೇ ಇಲ್ಲ. ಯಾರಿಗೂ ಗೊತ್ತಾಗದಂತೆ ಬಿಜೆಪಿಯು ತನ್ನ ಹಿಡನ್ ಅಜೆಂಡಾವನ್ನು ಜಾರಿ ಮಾಡಲು ಹೊರಟಿದೆ. ವಿಚಾರಗಳನ್ನು ಚರ್ಚೆ ಮಾಡುವುದು, ವಿನಿಮಯ ಮಾಡುವುದು, ಅನುಷ್ಠಾನ ಮಾಡುವುದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪೂರಕ ಬೆಳವಣಿಗೆ. ಆದರೆ ಸಂಸತ್ ನಡೆಯುವಾಗ ಪ್ರಧಾನಿ, ಗೃಹ ಸಚಿವರು ಉತ್ತರ ಕೊಡಬೇಕಾಗುತ್ತದೆ. ಆದರೆ ವಿಪಕ್ಷ ಸಂಸದ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಬಿಜೆಪಿ ನಾಯಕರು ಸಂಸದರನ್ನು ಅಮಾನತು ಮಾಡಿಸಿದ್ದಾರೆಂದು ದೂರಿದರು.

ಸರ್ವಾಧಿಕಾರಿ ಪ್ರಧಾನಿ

ಸಂಸದ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿಯುವ ಪ್ರಧಾನಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳ ಸಂಸದರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ, ಆ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಒಂದು ಕಡೆ ಸಂಸತ್ ಮೇಲೆ ಕಿಡಿಗೇಡಿಗಳು ದಾಳಿ ನಡೆದರೆ, ವಿಪಕ್ಷಗಳ ಮೇಲೆ ಮೋದಿ, ಅಮಿತ್ ದಾಳಿ ಮಾಡುತ್ತಿದಾರೆ. ಸಂಸತ್ ರಕ್ಷಣೆ ಕೊಡಲು ವಿಫಲರಾಗಿದ್ದಾರೆ ಎಂದು ದೂರಿದರು.

ಸಭಾಧ್ಯಕ್ಷರು ಬಿಜೆಪಿ ಕೈಗೊಂಬೆ

ಉಭಯ ಸದನಗಳ ಸಭಾಧ್ಯಕ್ಷರು ಬಿಜೆಪಿ ಕೈಗೊಂಬೆಯಾಗಿದ್ದಾರೆ. ದೇಶದಲ್ಲಿ ಸರ್ವಾಧಿಕಾರಿ ಧೋರಣೆಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ, ಸಂಸತ್ ಮೇಲಿನ ದಾಳಿಗೆ ನೈತಿಕ ಹೊಣೆ ಹೊತ್ತು ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಎಂದು ಒತ್ತಾಯಿಸಿದರು.

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಕ್ರಮ

ಕಿಡಿಗೇಡಿಗಳಿಗೆ ಪಾಸ್ ಕೊಟ್ಟಿರುವ ಪ್ರತಾಪ್ ಸಿಂಹ ಸಾರ್ವಜನಿಕರವಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ, ಅವರನ್ನು ಕೂಡಲೇ ಅಮಾನತು ಮಾಡಬೇಕಿತ್ತು, ಆದರೆ ಯಾವುದೇ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ, ಪ್ರತಾಪ್ ಸಿಂಹ ಆರೋಪಿ ಸ್ಥಾನದಲ್ಲಿ ಇದ್ದಾರೆ. ಅವರ ವಿರುದ್ಧ ತನಿಖೆ ಆಗಲೇಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಸಿ ಚಿದಂಬರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಎಂ ದ್ಯಾವಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ನಗರ ಘಟಕದ ಅಧ್ಯಕ್ಷ ರುದ್ರಪ್ಪ, ನಗರಸಭೆ ಸದಸ್ಯ ಶ್ರೀಧರ್, ಮುಖಂಡರಾದ ಅಮ್ಜದ್ ಪಾಷ, ದೊಡ್ಡಯ್ಯ, ಪ್ರಶಾಂತ್ ಬಾಬು, ಸುಂಡಳ್ಳಿ ಮಂಜುನಾಥ್, ಎಂ.ಸಿ ಶಿವಪ್ರಕಾಶ್, ಕೋಡಿಹಳ್ಳಿ ಚನ್ನೇಗೌಡ, ಹಾಲಹಳ್ಳಿ ಸಂಪತ್, ಎಂ.ಸಿ ದೀಪಕ್ ಸೇರಿದಂತೆ ಮತ್ತಿತರರು ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!