Friday, November 20, 2026

ಪ್ರಾಯೋಗಿಕ ಆವೃತ್ತಿ

ನುಡಿ ಹಬ್ಬ | ವಸ್ತು ಪ್ರದರ್ಶನ ಮಳಿಗೆಗಳು ವೈವಿಧ್ಯಮಯವಾಗಿರಲಿ : ಮಧು ಮಾದೇಗೌಡ

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯುವ ವಸ್ತು ಪ್ರದರ್ಶನ ಮಳಿಗೆಗಳು ವೈವಿಧ್ಯಮಯವಾಗಿರಲಿ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತಿರಲಿ ಎಂದು ವಿಧಾನ ಪರಿಷತ್ ಶಾಸಕ ಮಧು ಜಿ. ಮಾದೇಗೌಡ ಅವರು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಸ್ತು ಪ್ರದರ್ಶನ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇಲಾಖೆಗಳಿಂದ ಪ್ರತಿನಿಧಿಸುವ ವಸ್ತು ಪ್ರದರ್ಶನ ಮಳಿಗೆಗಳು ಪರಿಣಾಮಕಾರಿಯಾಗಿ ವಿನ್ಯಾಸಗೊಳಿಸಿ. ಒಂದೇ ರೀತಿಯ ಬದಲು ವೈವಿಧ್ಯಮಯವಾಗಿರಲಿ ಎಂದು ಸಲಹೆ ನೀಡಿದರು.

ಪ್ರತಿಯೊಂದು ಇಲಾಖೆಯು ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಿ. ಮಳಿಗೆ ವಿನೂತನ, ಪರಿಣಾಮಕಾರಿಯಾಗಿ ಸ್ಥಾಪಿಸುವ ಸಂಬಂಧ ಚರ್ಚಿಸಿ, ಸಮ್ಮೇಳನದ ಯಶಸ್ವಿಗೆ ಸಹಕರಿಸಿ ಎಂದರು.

ಸಭೆಯಲ್ಲಿ ಪ್ರತಿಯೊಂದು ಇಲಾಖೆಯು ಯಾವ ರೀತಿಯ ಮಳಿಗೆಗಳನ್ನು ಸ್ಥಾಪಿಸಬೇಕು ಎಂದು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಚಾಲಕರಾದ ಡಾ. ಮೀರಾಶಿವಲಿಂಗಯ್ಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ವಿ. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ. ವಿ. ನಂದೀಶ್, ಪ್ರವಾಸೋದ್ಯಮ ಇಲಾಖೆಯ ರಾಘವೇಂದ್ರ, ಚೆಸ್ಕಾಂ ನ ಕಾರ್ಯ ನಿರ್ವಾಹಕ ಅಭಿಯಂತರರಾದ ಎಸ್ ಅನಿತಾ, ಆರೋಗ್ಯ ಇಲಾಖೆಯ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ ಸೋಮಶೇಖರ್, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಸುರೇಶ್, ಸಮಾಜ ಕಲ್ಯಾಣ ಇಲಾಖೆಯ ಡಾ. ಸಿದ್ದಲಿಂಗೇಶ್, ಹುಸ್ಕೂರು ಕೃಷ್ಣೆಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ