ಮಂಡ್ಯ ತಾಲ್ಲೂಕಿನ ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಮೇ.20ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಸೆಸ್ಕಾಂ ಇಲಾಖೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ ಉಂಟಾಗುವ ಗ್ರಾಮಗಳಾದ ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ, ಬಿದರಕಟ್ಟೆ, ಬೆನ್ನಹಟ್ಟಿ, ಮನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಂಡ್ಯ ಸೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.