ಮಂಡ್ಯ ವಿಶ್ವವಿದ್ಯಾಲಯದಲ್ಲಿ ಸ್ಥಳೀಯ ರೈತರ ಕಾರ್ಮಿಕರ ಬಡವರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಪದವಿ ತರಗತಿಗಳು ಲಭ್ಯವಿಲ್ಲದೆ ಬೆಂಗಳೂರು ಮೈಸೂರಿನ ಖಾಸಗಿ ಅಥವಾ ನಗರಗಳಿಗೆ ತೆರಳಬೇಕಿದ್ದು, 2024 25 ನೇ ಸಾಲಿಗೆ ಪ್ರಾರಂಭವಾಗುವಂತೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಒತ್ತಾಯ ಮಾಡಿದೆ.
ಮಂಡ್ಯ ವಿವಿಯ ಕುಲಪತಿ ಪ್ರೊ.ಶಿವಚಿತ್ತಪ್ಪ ಅವರಿಗೆ ಮನವಿ ಸಲ್ಲಿಸಿದ ಕರವೇ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪನಂಜಮ್ಮಣಿ ಅವರ ಹೆಸರನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಂ, ಪದಾಧಿಕಾರಿಗಳಾದ ಶಿವಲಿಂಗು, ಮಂಚಶೆಟ್ಟಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.




