ಫೆಡರಲ್ ಸಹಕಾರ ಸಂಘಗಳು, ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಇದರ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆ ಮತ್ತು ಪದಾಧಿಕಾರಿಗಳ ಚುನಾವಣೆ- 2025 ಅನ್ನು ನವೆಂಬರ್ 2 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಗಳವರೆಗೆ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆಯನ್ನು ಅಕ್ಟೋಬರ್ 26 ರಂದು ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 27 ಕೊನೆಯ ದಿನವಾಗಿದೆ. ನವೆಂಬರ್ 2 ರಂದು ಮತದಾನದ ನಂತರ ಮತ ಎಣಿಕೆ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




