Monday, May 6, 2024

ಪ್ರಾಯೋಗಿಕ ಆವೃತ್ತಿ

ಅರ್ಥಪೂರ್ಣ ಶಿಕ್ಷಕ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಿ

ಸೆ.5 ರಂದು ಶಿಕ್ಷಕರ ದಿನಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಶ್ವತಿ ತಿಳಿಸಿದರು.

ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಯಲಿದ್ದು,ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದರು.

ಕಿರಿಯ/ಹಿರಿಯ/ಪ್ರೌಢ ಶಾಲೆಗಳ ಹಂತದಲ್ಲಿ ಜಿಲ್ಲಾ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸನ್ಮಾನ ಮಾಡಿ,ದಕ್ಷಿಣ ವಲಯ ಮತ್ತು ಉತ್ತರ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ,ಊಟದ ವ್ಯವಸ್ಥೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲು ಕ್ರಮವಹಿಸಿ ಎಂದು ಹೇಳಿದರು.

ಕಾರ್ಯಕ್ರಮವು ವ್ಯವಸ್ಥಿತವಾಗಿ ನಡೆಸಲು ಶಿಕ್ಷಕರ ದಿನಾಚರಣೆಯ ವಿವಿಧ ಸಮಿತಿಗಳನ್ನು ರಚಿಸಿ,
ಜವಾಬ್ದಾರಿಗಳನ್ನು ವಹಿಸಲು ಹಾಗೂ ಕಾರ್ಯಕ್ರಮಕ್ಕೆ ಬೇಕಾದ ವಿವಿಧ ವ್ಯವಸ್ಥೆಗಳು ಆಚುಕಟ್ಟಾಗಿ ನಡೆಯುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸರಸ್ವತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜವರೇಗೌಡ, ವೀರಾ ಶಿವಲಿಂಗಯ್ಯ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ನಾಗೇಶ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ರವಿಶಂಕರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಸೆಪ್ಟಂಬರ್ 5 ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಯಲಿದೆ. ಶಿಕ್ಷಕರ ದಿನಾಚರಣೆಯ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವತಿ ಅವರು ಅಧಿಕಾರಿಗಳಿಗೆ ತಿಳಿಸಿದರು..

ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿರಿಯ/ಹಿರಿಯ/ಪ್ರೌಢ ಶಾಲೆಗಳ ಹಂತದಲ್ಲಿ ಜಿಲ್ಲಾ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸನ್ಮಾನ ಮಾಡಿ,ದಕ್ಷಿಣ ವಲಯ ಮತ್ತು ಉತ್ತರ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ,ಊಟದ ವ್ಯವಸ್ಥೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲು ಕ್ರಮವಹಿಸಿ ಎಂದು ಹೇಳಿದರು

ಕಾರ್ಯಕ್ರಮವು ವ್ಯವಸ್ಥಿತವಾಗಿ ನಡೆಸಲು ಶಿಕ್ಷಕರ ದಿನಾಚರಣೆಯ ವಿವಿಧ ಸಮಿತಿಗಳನ್ನು ರಚಿಸಿ
ಜವಾಬ್ದಾರಿಗಳನ್ನು ವಹಿಸಲು ಹಾಗೂ ಕಾರ್ಯಕ್ರಮಕ್ಕೆ ಬೇಕಾದ ವಿವಿಧ ವ್ಯವಸ್ಥೆಗಳು ಆಚುಕಟ್ಟಾಗಿ ನಡೆಯುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸರಸ್ವತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜವರೇಗೌಡ, ವೀರಾ ಶಿವಲಿಂಗಯ್ಯ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ನಾಗೇಶ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ರವಿಶಂಕರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!