Friday, November 20, 2026

ಪ್ರಾಯೋಗಿಕ ಆವೃತ್ತಿ

ದಡಾರ -ರುಬೆಲ್ಲಾ ನಿರ್ಮೂಲನೆಗೆ ಕೈಜೋಡಿಸಿ : ಡಾ.ಹೆಚ್.ಎನ್.ಗೋಪಾಲ ಕೃಷ್ಣ

ದಡಾರ ಮತ್ತು ರುಬೆಲ್ಲಾ ರೋಗವನ್ನು 2023 ರ ಅಂತ್ಯದೊಳಗೆ ನಿರ್ಮೂಲನೆ ಮಾಡಲು ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಡಾರ-ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮವನ್ನು ಡಿಸೆಂಬರ್ 2023ರ ಒಳಗಾಗಿ ಸಂಪೂರ್ಣವಾಗಿ ನಿರ್ಮೂಲನಾ ಮಾಡಲು ಯೋಜನೆ ರೂಪಿಸಿ. ಇತ್ತೀಚಿನ ದಿನಗಳಲ್ಲಿ ವಿವಿಧ ರಾಜ್ಯಗಳಲ್ಲಿ ದಡಾರ ಮತ್ತು ರುಬೆಲ್ಲಾ ಪ್ರಕರಣಗಳು ವರದಿಯಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ನಿರ್ದೇಶನದಂತೆ ವಿಶೇಷವಾಗಿ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಎಂದರು.

ವಲಸೆ ಕಾರ್ಮಿಕರ, ಸ್ಲಂಗಳ ಹಾಗೂ ಇನ್ನಿತರ ಸ್ಥಳಗಳಲ್ಲಿ ವಾಸಿಸುವ ಮಕ್ಕಳು ಲಸಿಕೆಯನ್ನು ಪಡೆಯದೇ ಇದ್ದಲ್ಲಿ ಅವರನ್ನು ಗುರುತಿಸಿ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ಕೊಡಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮವನ್ನು ತೆಗೆದುಕೊಳ್ಳಿ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಎನ್.ಧನಂಜಯ ಅವರು ಮಾತನಾಡಿ, ಪ್ರತಿ ಮಗುವಿಗೆ 9-12 ತಿಂಗಳು, 16-24 ತಿಂಗಳಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ತಪ್ಪದೇ ಕೊಡಿಸಬೇಕು. ಏಪ್ರಿಲ್ ಯಿಂದ ನವೆಂಬರ್ ವರೆಗೆ ಜಿಲ್ಲೆಯಲ್ಲಿ ಸುಮಾರು 15,187 ಮಕ್ಕಳಲ್ಲಿ ಈಗಾಗಲೇ 15,042 ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ನೀಡಲಾಗಿದ್ದು, ರಾಜ್ಯದಲ್ಲಿ ಮಂಡ್ಯ ಮೊದಲ ಸ್ಥಾನದಲ್ಲಿದೆ ಎಂದರು.

ಲಸಿಕೆಯನ್ನು ಪಡೆಯದೆ ಇರುವ ಮಕ್ಕಳಿಗಾಗಿ ಈಗಾಗಲೇ ಸರ್ವೆಯನ್ನು ಕೈಗೊಂಡು ಆ ಮಕ್ಕಳಿಗೆ ಸಹ ಲಸಿಕೆಯನ್ನು ಕೊಡಿಸುವಂತಹ ವ್ಯವಸ್ಥೆಯನ್ನು ಮಾಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ಕುರಿತು ಈಗಾಗಲೇ ಅಂಗನವಾಡಿ ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರಿಗೆ ತರಬೇತಿಯನ್ನು ಸಹ ನೀಡಲಾಗಿದೆ ಎಂದರು.

ಸಭೆಯಲ್ಲಿ ಆರ್.ಸಿ.ಹೆಚ್.ಅಧಿಕಾರಿ ಡಾ.ಅನಿಲ್ ಕುಮಾರ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಆಶಾಲತಾ, ಆರೋಗ್ಯ ಇಲಾಖೆಯ ಡಾ.ರವೀಂದ್ರ, ಡಾ.ಮರಿಗೌಡ, ಡಾ.ಜವರೇಗೌಡ, ಡಾ.ಶಶಿಧರ್ ಭವಾನಿ ಶಂಕರ್, ಡಾ.ಕೆ.ಪಿ ಅಶ್ವಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜು, ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್.ನಿರ್ಮಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ