Tuesday, November 24, 2026

ಪ್ರಾಯೋಗಿಕ ಆವೃತ್ತಿ

ವೈದ್ಯಕೀಯ ಕ್ಷೇತ್ರದಲ್ಲಿ ಶುಶ್ರೂಷಕ ಸೇವೆ ಅಪಾರ

ನರ್ಸ್ ಗಳು ಉತ್ತಮ ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರಲ್ಲಿ ಅನುಮಾನವಿಲ್ಲ, ಶುಶ್ರೂಷಕ ಸೇವೆಯು ವೈದ್ಯಕೀಯ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಹೇಳಿದರು.

ಮಂಡ್ಯ ನಗರದ  ಎಸ್.ಡಿ.ಜಯರಾಂ ನರ್ಸಿಂಗ್ ಕಾಲೇಜಿನಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯಘಟಕ ಆಯೋಜಿಸಿದ್ದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವೈದ್ಯರು ಮತ್ತು ರೋಗಿಗಳ ನಡುವೆ ನರ್ಸ್ ಗಳು ಸೇತುವೆಯಂತೆ ಕೆಲಸ ಮಾಡುತ್ತಾರೆ, ರೋಗಿಯ ನಾಡಿ ಮಿಡಿತ, ಅವರ ಚೇತರಿಕೆಯ ಹಾದಿ, ವೈದ್ಯರಿಗಿಂತಲೂ ಶುಶ್ರೂಷಕರಿಯರಿಗೆ ಬೇಗ ತಿಳಿಯುತ್ತದೆ ಎಂದರು.

ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಮಾತನಾಡಿ, ಕೋವಿಡ್-19 ಸಂಕಷ್ಟಕರ ಯುದ್ಧದಲ್ಲಿ ಸೋಂಕು ಹರಡಂತೆ ಸತತವಾಗಿ ಶ್ರಮಿಸಿದ ನರ್ಸ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು, ವೈದ್ಯರ ಸೇವೆಯು ಅವಿಸ್ಮಣೀಯ ಎಂದು ಗುಣಗಾನ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನಿವೃತ್ತ ನ್ಯಾಯಾಧೀಶ ಅರಳಿನಾಗರಾಜು ಮತ್ತು ಗಣ್ಯರು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯಘಟಕ ರಾಜ್ಯಾಧ್ಯಕ್ಷ ಪೋತೇರ ಮಹದೇವು, ಎಸ್.ಡಿ. ಜಯರಾಂ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಎಸ್.ಶ್ರುತಿ, ವಕೀಲ ಎಂ.ಗುರುಪ್ರಸಾದ್, ಶಿಕ್ಷಕಿ ಆಶಾರಾಣಿ, ಮಮತಾ, ಸಿದ್ದರಾಜು, ರಾಮಚಂದ್ರ, ಗಿರಿಜಾ, ಸಾಹಿತಿ ಎಸ್.ಕೃಷ್ಣಸ್ವರ್ಣಸಂದ್ರ, ಸುಧಾಆರಾಧ್ಯ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ